News Karnataka Kannada
Tuesday, May 07 2024
ಮೈಸೂರು

ಸ್ವಗ್ರಾಮದಲ್ಲಿ ಮತ ಚಲಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ, ಪುತ್ರ ಸುನೀಲ್ ಬೋಸ್

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹಕ್ಕು ಚಲಾಯಿಸಿದ್ದಾರೆ.
Photo Credit : NewsKarnataka

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹಕ್ಕು ಚಲಾಯಿಸಿದ್ದಾರೆ.

ಗ್ರಾಮದ ಸರ್ಕಾರಿ ಶಾಲೆಯಲ್ಲಿರುವ ಮತಗಟ್ಟೆಗೆ ಅಪ್ಪ ಮತ್ತು ಮಗ ಇಬ್ಬರು ಒಟ್ಟಿಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿ ಇಬ್ಬರು ಪೋಟೋ ಗೆ ಪೋಸ್ ಕೊಟ್ಟಿದ್ದಾರೆ.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮಾತನಾಡಿ, ಡೆಮಾಕ್ರಸಿಗೆ ಒಳ್ಳೆಯ ಬೆಳವಣಿಗೆ. ಪ್ರಜಾಪ್ರಭುತ್ವದ ನೆಲೆ ಉಳಿದುಕೊಳ್ಳಬೇಕು ಎಂದು ಹೇಳಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ನಮಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತದಿಂದ ನಾವು ಗೆಲ್ಲುತ್ತೇವೆ ಎಂದು ಹದಿನಾರು ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು