News Karnataka Kannada
Saturday, May 11 2024
ಮೈಸೂರು

ಜನಸಂಪರ್ಕ ಸಭೆ ನಡೆಸಿದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ

ವರುಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಆಶ್ರಯ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
Photo Credit : News Kannada

ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಆಶ್ರಯ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಂಬಳ್ಳಿ ಮತ್ತು ಬಾಣೂರು ಗ್ರಾಮಗಳಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಜನರು ನಮ್ಮ ತಂದೆಯವರನ್ನು ಮತ್ತೆ ಮುಖ್ಯಮಂತ್ರಿ ಮಾಡಿದ್ದೀರಿ ನಿಮ್ಮ ಋಣವನ್ನು ತೀರಿಸಲು ನಮ್ಮಿಂದ ಸಾಧ್ಯವಿಲ್ಲ. ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಸಮುದಾಯ ಭವನ, ಸಿಸಿ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಇನ್ನೂ ಸ್ಥಳದಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಿ, ಪರಿಹಾರ ಸೂಚಿಸುವ ಜನ ಸಂಪರ್ಕ ಸಭೆ ಇದಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಸವರಾಜು, ರಂಗಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು