Categories: ಮೈಸೂರು

ಮೈಸೂರು: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೂ ಬಂತು ಇ-ಹುಂಡಿ!

ಮೈಸೂರು: ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ   ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇಹುಂಡಿ ಬಿಡುಗಡೆ ಮಾಡಿದೆ. ಹೀಗಾಗಿ ಇನ್ನು ಮುಂದೆ ಕಾಣಿಕೆ ಹಾಕುವವರು ಚಿಲ್ಲರೆ, ನಗದು ಬದಲಿಗೆ ನೇರವಾಗಿ ಡಿಜಿಟಲ್ ಪೇಮೆಂಟ್ ಮಾಡಬಹುದಾಗಿದೆ.

ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು ಇ ಹುಂಡಿಯನ್ನು ಉದ್ಘಾಟನೆ ಮಾಡಿ, ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ  ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿಗೆ ಕಾಣಿಕೆಯನ್ನು ಹಾಕಬಹುದಾಗಿದೆ ಎಂದರು.

ಈ ಕುರಿತು ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.  ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿಯೂ ತಿಳಿಸಿದರು.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ  ಸಿ.ಜಿ. ಕೃಷ್ಣ ಮಾತನಾಡಿ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ  ಬಹುತೇಕ ಎ – ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ’ ಇ – ಹುಂಡಿ ಸೌಲಭ್ಯವಿದ್ದು ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳಸಿಕೊಳ್ಳುವಂತೆ ಇಲಾಖೆಯಿಂದ ಸೂಚಿಸಿದ್ದು, ಅದರಂತೆ ಅಳವಡಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ  ಕರ್ನಾಟಕ ಗ್ರಾಮೀಣ ಬ್ಯಾಂಕ್ ಈ ದಸರಾ ಸಂದರ್ಭದಲ್ಲಿ ಆಚರಿಸುತ್ತಿರುವ ರೀಟೇಲ್ ಉತ್ಸವದ ತಾತ್ಕಾಲಿಕ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಚಾಮುಂಡಿಬೆಟ್ಟ ಶಾಖೆಯ ಮುಂಭಾಗದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮೈಸೂರು ಪ್ರಾದೇಶಿಕ ವ್ಯವಸ್ಥಾಪಕರಾದ ಕೆ.ಎಸ್.ವಿಶ್ವನಾಥ್ ಅವರು ಮಾತನಾಡಿ ಉತ್ಸವದ ಸಂದರ್ಭದಲ್ಲಿ ಗೃಹ ಸಾಲ, ವಾಹನ ಸಾಲ, ಅಡಮಾನ ಸಾಲಗಳಿಗೆ ಅನ್ವಯಿಸುವ ಬಡ್ತಿ ದರ ಮತ್ತು ಸೇವಾ ಶುಲ್ಕ ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದರು.

ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ,  ಚಾಮುಂಡಿಬೆಟ್ಟ ಶಾಖೆಯ ವ್ಯವಸ್ಥಾಪಕರಾದ ಸಿಂಧು ಮತ್ತು ಪ್ರಿಯಾಂತ್ ಅವರು ಇದ್ದರು.

Sneha Gowda

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

6 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

23 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

38 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

54 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago