News Karnataka Kannada
Thursday, May 09 2024
ಮೈಸೂರು

ಹೋರಾಟದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.
Photo Credit : NewsKarnataka

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಇಂದು 46ನೇ ದಿನಕ್ಕೆ ಕಾಲಿಟ್ಟಿದೆ, ಪ್ರತಿಭಟನೆಯಲ್ಲಿ ಅಳಗಂಚಿ ಗ್ರಾಮದ ನಂಜನಾಯಕ ಎಂಬುವರ ಪತ್ನಿ ನಿಂಗಮ್ಮ ಅವರಿಗೆ ಸೇರಿದ ಎರಡು ಎಕರೆ ಪ್ರದೇಶದ ಜಮೀನನ್ನು ನಮಗೆ ವಾಪಸ್ ಕೊಡಿ ಇಲ್ಲ ನಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು ಎಂದು ಹೋರಾಟವನ್ನು ನಡೆಸುತ್ತಿದ್ದರು.

ಪ್ರತಿಭಟನೆಯ ವೇಳೆ ಅಸ್ವಸ್ಥರಾಗಿ ಬಿದ್ದಿದ್ದ 65 ವರ್ಷದ ನಿಂಗಮ್ಮ ಅವರನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ. 65 ವರ್ಷದ ನಿಂಗಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಅಳಗಂಚಿ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯಲ್ಲಿ ಪ್ರತಿಭಟನೆ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು