Categories: ಮೈಸೂರು

ಹೋರಾಟದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಇಂದು 46ನೇ ದಿನಕ್ಕೆ ಕಾಲಿಟ್ಟಿದೆ, ಪ್ರತಿಭಟನೆಯಲ್ಲಿ ಅಳಗಂಚಿ ಗ್ರಾಮದ ನಂಜನಾಯಕ ಎಂಬುವರ ಪತ್ನಿ ನಿಂಗಮ್ಮ ಅವರಿಗೆ ಸೇರಿದ ಎರಡು ಎಕರೆ ಪ್ರದೇಶದ ಜಮೀನನ್ನು ನಮಗೆ ವಾಪಸ್ ಕೊಡಿ ಇಲ್ಲ ನಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು ಎಂದು ಹೋರಾಟವನ್ನು ನಡೆಸುತ್ತಿದ್ದರು.

ಪ್ರತಿಭಟನೆಯ ವೇಳೆ ಅಸ್ವಸ್ಥರಾಗಿ ಬಿದ್ದಿದ್ದ 65 ವರ್ಷದ ನಿಂಗಮ್ಮ ಅವರನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ. 65 ವರ್ಷದ ನಿಂಗಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಅಳಗಂಚಿ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆಯಲ್ಲಿ ಪ್ರತಿಭಟನೆ ಮುಂದುವರೆದಿದೆ.

Ashika S

Recent Posts

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

10 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

19 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

34 mins ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

35 mins ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

53 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

1 hour ago