Categories: ಮೈಸೂರು

ಸಂವಿಧಾನದ ವಿರೋಧಿಗಳು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಿ- ಯತೀಂದ್ರ ಸಿದ್ದರಾಮಯ್ಯ ಕರೆ

ತಾಂಡವಪುರ: ದೇಶದ ಸಮಾನತೆಗೆ ಸಂವಿಧಾನವನ್ನು ರಚನೆ ಮಾಡಿದಂತಹ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ವಿರೋಧಿಸುವವರನ್ನು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಜೈ ಭೀಮ್ ಯುವಕರ ಸಂಘದ ಮುಖಂಡರುಗಳಿಗೆ ಕರೆ ನೀಡಿದರು.

ಅವರು ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಗ್ರಾಮದಲ್ಲಿ ಸಂವಿಧಾನ ದಿನದ ಅಂಗವಾಗಿ ಗ್ರಾಮದ ಜೈ ಭೀಮ್ ಯುವಕರ ಸಂಘದವರು ಏರ್ಪಡಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಆಟದಲ್ಲಿ ಜಯಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸಂವಿಧಾನದ ದಿನದ ಅಂಗವಾಗಿ ಗ್ರಾಮದ ಯುವಕರು ಇಂತಹ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ ಮಾಡಿ ಸುತ್ತಮುತ್ತಲ ಗ್ರಾಮಗಳ ಯುವಕರು ಬಾಂಧವ್ಯ ಬೆಸೆಯಲು ಈ ಆಟವು ಪ್ರಮುಖ ಪಾತ್ರ ವಹಿಸುವುದು, ಯುವಕರ ಈ ಪ್ರಯತ್ನಕ್ಕೆ ಶಾಸಕ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ ಕ್ರೀಡೆ ಯುವಕರಿಗೆ ಬಹಳ ಮುಖ್ಯವಾಗಿದ್ದು ದೇಹ ಆರೋಗ್ಯ ಹಾಗೂ ಉತ್ತಮ ಸ್ನೇಹ ಬಾಂಧವ್ಯ ಬೆಸೆಯುವ ಆಟವಾಗಿದ್ದು ಆಟದಲ್ಲಿ ಗೆದ್ದವರು ಇಗ್ಗದೆ, ಸೋತವರು ಕುಗ್ಗದೆ ಎಲ್ಲರೂ ಸಮಾನಚಿತವಾಗಿ ಕಾಣಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ಸಂವಿಧಾನದ ಅಡಿಯಲ್ಲಿ ಅಧಿಕಾರಕ್ಕೆ ಬಂದ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ತಿದ್ದುಪಡಿ ಮಾಡುವ ಉನ್ನಾರ ನಡೆಯುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ಅಂತಹ ವಿಚಾರ ಆದ್ದರಿಂದ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ವಿರೋಧಿಸುವ ಪಟ್ಟ ಭದ್ರ ಹಿತ ಶಕ್ತಿಗಳು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕು ವೆಂದು ಜೈ ಭೀಮ್ ಯುವಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಆರ್ ಮಹದೇವು ಗ್ರಾಮ ಪಂಚಾಯತಿ ಅಧ್ಯಕ್ಷ ಸರಸ್ವತಿ ಗಾರ್ಡನ್ ಮಹೇಶ್ ಕಾಂಗ್ರೆಸ್ ಮುಖಂಡರಾದ ಶಾಂತಮ್ಮ ಬುಲೆಟ್ ಮಹಾದೇವ ಶಿವರಾಮು ಬಾಲರಾಜು ಪುಟ್ಟಣ್ಣ ರಾಜಣ್ಣ ನಾಗರಾಜು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದ ಗುರು ಮಲ್ಲೇಶ ಚಿನ್ನಂಬಳ್ಳಿ ರಾಜು ಹಾಗೂ ಗೌತಮ್ ಬುದ್ಧ ಯುವಕ ಯುವಕರ ಸಂಘ ಜೈ ಭೀಮ್ ಯುವಕರ ಸಂಘದವರು ಹಾಗೂ ಸುತ್ತಮುತ್ತಲ ಗ್ರಾಮಗಳ ಕ್ರೀಡಾ ಅಭಿಮಾನಿಗಳು ಮುಖಂಡರುಗಳು ಭಾಗವಹಿಸಿದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago