ನಂಜನಗೂಡು: ಸಂಚಾರ ನಿಮಯಗಳನ್ನು ಪ್ರತಿಯೊಬ್ಬರು ಚಾಚು ತಪ್ಪದೇ ಪಾಲಿಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಹೇಳಿದರು.
ನಂಜನಗೂಡು ನಗರದ ಸಿಟಿಜನ್ ಕಾಲೇಜಿನಲ್ಲಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಆಯೋಜಿಸಿದ್ದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಜೀವನ ಅಮೂಲ್ಯವಾದುದ್ದು, ರಸ್ತೆ ಸುರಕ್ಷತೆಗಾಗಿ ಅಳವಡಿಸಲಾಗಿರುವ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅನಾಹುತಗಳನ್ನು ತಡೆಯಬಹುದು. ಆದ್ದರಿಂದ ಸಂಚಾರಿ ನಿಯಮಗಳನ್ನು ಪಾಲಿಸಿ ದೀರ್ಘಾಯುಷಿಗಳಾಗಿ ಬಾಳಬೇಕು ಎಂದರು.
ವಿದ್ಯಾರ್ಥಿಗಳು ಡಿ.ಎಲ್ ಇಲ್ಲದೆ ಬೈಕ್ ಮುಟ್ಟಬಾರದು, ಪೋಷಕರು ಮಕ್ಕಳಿಗೆ ಬೈಕ್ ಅಥವಾ ಕಾರು ಕೊಡಬಾರದು, ದಂಡ ಮತ್ತು ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ಕುಡಿದು ವಾಹನ ಚಲಾಯಿಸುವುದು ಅಥವಾ ಸಿಗ್ನಲ್ ಜಂಪ್ ಮಾಡುವುದನ್ನು ಮಾಡಬಾರದು. ಸೀಟ್ ಬೆಲ್ಟ್ ಹಾಕಿಕೊಳ್ಳುವುದು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವ ಮೂಲಕ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಇಲ್ಲವಾದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.
ಇನ್ನೂ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸ ಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.