News Karnataka Kannada
Saturday, May 18 2024
ಮೈಸೂರು

ನಮ್ಮ ಭೂಮಿ ನಮಗೆ ವಾಪಸ್ ಕೊಡಿ ಇಲ್ಲ ನಮ್ ಮಕ್ಕಳಿಗೆ ಉದ್ಯೋಗ ನೀಡಿ- ರೈತರು

ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆ ಮುಂಭಾಗದಲ್ಲಿ ರೈತರು ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
Photo Credit : News Kannada

ನಂಜನಗೂಡು: ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆ ಮುಂಭಾಗದಲ್ಲಿ ರೈತರು ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಸುಮಾರು 45ಕ್ಕೂ ಹೆಚ್ಚು ಕುಟುಂಬದ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು. ಇಲ್ಲವಾದಲ್ಲಿ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಮಕ್ಕಳಿಗೆ ಉದ್ಯೋಗ ನೀಡಿ, ಇಲ್ಲವಾದಲ್ಲಿ ನಮ್ಮ ಕೃಷಿ ಭೂಮಿ ನಮಗೆ ವಾಪಸ್ ಕೊಡಿ ಎಂದು ಕಾರ್ಖಾನೆಯ ಬಾಗಿಲನ್ನು ಬಂದ್ ಮಾಡಿ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎತ್ತಿನ ಗಾಡಿ ಮತ್ತು ಹಸುಗಳನ್ನು ಕಟ್ಟಿಹಾಕಿ, ಹಾಲು ಕರೆದು ಅಲ್ಲೆ ಅಡುಗೆ ಮಾಡಿಕೊಂಡು ಕಳೆದ ಐದು ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಇಲ್ಲಿಯ ತನಕ ಅಧಿಕಾರಿಗಳಾಗಲೀ ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ ಎಂದು ರೈತರು ಕಿಡಿಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು