ನಂಜನಗೂಡು: ಚಿರತೆ ದಾಳಿಗೆ ಮೇಕೆಯೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವಶೆಟ್ಟಿ ಎಂಬುವವರಿಗೆ ಮೇಕೆಯಾಗಿದ್ದು, ಕೋಣನೂರು, ಪಿ. ಮರಹಳ್ಳಿ, ಹನುಮನಪುರ ಭಾಗಕ್ಕೆ ಹೊಂದಿಕೊಂಡಿರುವಂತೆ ಇರುವ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಮೇಕೆಯೊಂದನ್ನು ಎಳೆದೊಯ್ದು ಅರೆಬರೆ ತಿಂದು ಬಿಸಾಡಿದೆ. ಚಿರತೆ ಕಾಟ ಹೆಚ್ಚಾಗಿರುವುದರಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿದ್ದು ಭೂಮಿ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು. ಮೇಕೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಷಯ ತಿಳಿದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರವನ್ನು ನೀಡುವ ಭರವಸೆ ನೀಡಿದ್ದಾರೆ.