Categories: ಮೈಸೂರು

ಸುರಕ್ಷಿತ ಪ್ರಯಾಣಕ್ಕೆ ಉತ್ತಮ ರಸ್ತೆಗಳು ಅಗತ್ಯ

ಮೈಸೂರು: ರಸ್ತೆಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿರಬೇಕು. ಇದರಿಂದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಒಂದು ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಸಂದರ್ಭದಲ್ಲಿ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿರಬೇಕು. ಸಿಗ್ನಲ್ ಲೈಟ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪ್ರಯಾಣಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದರು.

ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು, ಅಪಘಾತ ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ. ಅಗತ್ಯ ಇರುವೆಡೆ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಿ. ಪೀಪಲ್ಸ್ ಪಾರ್ಕ್ ಸೇರಿದಂತೆ ಅಗತ್ಯ ಇರುವೆಡೆ ಹೈ-ಮಾಸ್ಟ್ ಲೈಟ್‌ಗಳನ್ನು ಅಳವಡಿಸುವಂತೆ ಹಾಗೂ ರಸ್ತೆಗಳಲ್ಲಿ ಹಂಪ್ಸ್‌ಗಳನ್ನು ಸರಿಯಾಗಿ ನಿರ್ವಹಿಸಿ ಎಂದು ನ್ಯಾಷನಲ್ ಹೈವೇ ಅಥಾರಿಟಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಅಪಘಾತಗಳಿಂದ ೪೭ ಜನ ಮರಣ ಹೊಂದಿದ್ದಾರೆ. ಏಪ್ರಿಲ್ ತಿಂಗಳಲ್ಲಿ 37ಅಪಘಾತಗಳು ಹಾಗೂ ನಗರ ವ್ಯಾಪ್ತಿಯಲ್ಲಿ 11ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 50 ಜನ ಸಾವನ್ನಪ್ಪಿದ್ದಾರೆ. ಆದ್ದರಿಂದ ಪ್ರಯಾಣಿಕರು ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಧರಿಸಿ, ಇತರೆ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಂಡು ವಾಹನ ಚಲಾಯಿಸುವಂತೆ ವಾಹನ ಸವಾರರಿಗೆ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪ ಪೊಲೀಸ್ ಆಯುಕ್ತೆ ಜಾಹ್ನವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥತರಿದ್ದರು.

Gayathri SG

Recent Posts

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

28 mins ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

54 mins ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

1 hour ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

2 hours ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

2 hours ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

2 hours ago