News Karnataka Kannada
Sunday, April 21 2024
Cricket
ಮೈಸೂರು

ಸರ್ಕಾರಿ ದಾಖಲೆ ತಿದ್ದಿ ಬೊಕ್ಕಸಕ್ಕೆ ನಷ್ಟ: ಪೌರಾಯುಕ್ತ, ಕಂದಾಯ ಸಿಬ್ಬಂದಿಯ ವಿರುದ್ಧ ಕೇಸು ದಾಖಲು

ಸರ್ಕಾರಿ ದಾಖಲೆಗಳನ್ನು ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Photo Credit : News Kannada

ನಂಜನಗೂಡು: ಸರ್ಕಾರಿ ದಾಖಲೆಗಳನ್ನು ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ ಎಫ್ಐಆರ್. ದಾಖಲಿಸಿದ್ದಾರೆ.

ನಂಜನಗೂಡು ತಾಲ್ಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ 3.16 ಬಿ.ಬಸಪ್ಪ ಎಂಬುವರಿಗೆ ಸೇರಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ. ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ. ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು. ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ. ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿಧ ಅಸೆಸ್ ಮೆಂಟ್ ಗಳಲ್ಲಿ ವಿವಿದ ಅಳತೆಗಳನ್ನು ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ. ಇವೆಲ್ಲಾ ಪ್ರಕ್ರಿಯೆಗಳನ್ನು ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನು ಖಾಲಿ ಬಿಡಲಾಗಿದೆ. ಕೆಲವೆಡೆ ತಿದ್ದಿ ಬರೆದಿದ್ದಾರೆ. ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿದೆ. ಈ ಹಿನ್ನಲೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶದಂತೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ದ ಹಾಲಿ ಪೌರಾಯುಕ್ತರಾದ ನಂಜುಂಡಸ್ವಾಮಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು