News Karnataka Kannada
Monday, April 29 2024
ಮೈಸೂರು

ಗಂಡ, ಅತ್ತೆ ಮಾವನಿಂದ ಕಿರುಕುಳ ಆರೋಪ: ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ

ಗಂಡ ಅತ್ತೆ ಮಾವರಿಂದ ಕಿರುಕುಳ ನೀಡಿದ ಆರೋಪದ ಮೇಲೆ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
Photo Credit : News Kannada

ನಂಜನಗೂಡು: ಗಂಡ ಅತ್ತೆ ಮಾವರಿಂದ ಕಿರುಕುಳ ನೀಡಿದ ಆರೋಪದ ಮೇಲೆ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.

35 ವರ್ಷದ ವಿಜಯಲಕ್ಷ್ಮೀ ಆತ್ಮಹತ್ಯೆ ಶರಣಾದ ಗೃಹಿಣಿಯಾಗಿದ್ದಾಳೆ. ಹಣಕ್ಕಾಗಿ ಪೀಡಿಸುತ್ತಿದ್ದ ಗಂಡ, ಅತ್ತೆ, ಮಾವ, ಮೈದುನರಿಂದಲೂ ಕಿರುಕುಳ ನೀಡುತ್ತಿದ್ದರು. ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನು ಬಿಟ್ಟು ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಜಯಲಕ್ಷ್ಮಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ನಾಪತ್ತೆಯಾಗಿದ್ದಾರೆ.

ಕಳೆದ 12 ವರ್ಷಗಳ ಹಿಂದೆ ಮೈಸೂರು ತಾಲ್ಲೂಕಿನ ಬೊಮ್ಮೇನಹಳ್ಳಿಯಿಂದ ನಂಜನಗೂಡು ತಾಲ್ಲೂಕಿನ ಹೊಸಕೋಟೆಯ ಹರೀಶ್ ಎಂಬಾತನಿಗೆ ವಿಜಯಲಕ್ಷ್ಮೀಯನ್ನು ಪೋಷಕರು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು.

ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆಗಳು ನಡೆಯುತ್ತಿತ್ತು. ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ, ಮಹೇಂದ್ರರಿಂದಲೂ ಕಿರುಕುಳ ನೀಡುತ್ತಿದ್ದರು.

ಈ ಗಲಾಟೆ ವಿಚಾರವಾಗಿ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ವಿಜಯಲಕ್ಷ್ಮಿ ದೂರು ನೀಡಿದ್ದರು. ಇವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು