Categories: ಮೈಸೂರು

ಪತ್ನಿಯೊಂದಿಗೆ ವಿಡಿಯೋ ಕಾಲ್; ಪತಿ ರೈಲಿಗೆ ತಾಕಿ ಸ್ಥಳದಲ್ಲಿಯೇ ಸಾವು

ನಂಜನಗೂಡು:  ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದ ಪತಿರಾಯ ರೈಲು ಬರುವುದನ್ನು ಕಾಣದೆ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲಕ 27 ವರ್ಷದ ಮನು ಕುಮಾರ್ ಮೃತ ವ್ಯಕ್ತಿಯಾಗಿದ್ದಾನೆ.

ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಮಂಗಳವಾರ ಬೆಳಿಗ್ಗೆ 7:40 ಸಮಯದಲ್ಲಿ ಬಯಲು ಶೌಚ ಗೃಹಕ್ಕೆ ತೆರಳಿ ಕೆರೆಯಲ್ಲಿ ನೀರು ತೆಗೆದುಕೊಂಡು, ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ಬರುತ್ತಿದ್ದಾಗ ಚಾಮರಾಜನಗರ ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ರೈಲು ತಾಕಿದೆ.

ರೈಲು ಬರುತ್ತಿರುವುದನ್ನೇ ಕಾಣದೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ರೈಲು ತಾಕಿದ ಪರಿಣಾಮ ವ್ಯಕ್ತಿ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

24 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

46 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

1 hour ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago