News Karnataka Kannada
Wednesday, April 17 2024
Cricket
ಮೈಸೂರು

ಮೈಸೂರು: ಅಪಘಾತದ ಕಾರಣ ಗುರುತಿಸಿ ಕ್ರಮಕ್ಕೆ ಸೂಚನೆ

Identify the cause of the accident and take action
Photo Credit : By Author

ಮೈಸೂರು: ಅಪಘಾತ ಉಂಟಾಗಲು ಇರುವ ಕಾರಣಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಅಪಘಾತ ಪ್ರಕರಣಗಳಿಂದ ಆಗುವ ಸಾವು ನೋವುಗಳನ್ನು ಕಡಿಮೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಲ್ಮೆಟ್ ಧರಿಸದೆ ಇರುವುದು, ಸೀಟ್ ಬೆಲ್ಟ್ ಹಾಕದೆ ಇರುವುದು, ಅಜಾಗರೂಕತೆಯಿಂದ ಚಾಲನೆ ಹಾಗೂ ಮಧ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು, ಚಾಲಕರ ನಿರ್ಲಕ್ಷ್ಯ, ರಸ್ತೆಗಳ ದುರಸ್ತಿ ಅಥವಾ ಸರಿಯಾಗಿ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸದೆ ಇರುವುದು ಅಪಘಾತಗಳಿಗೆ ಕಾರಣವಾಗಬಹುದು. ಈ ರೀತಿಯ ನಿಯಮಗಳ ಉಲ್ಲಂಘನೆಗಳನ್ನು ವಾಹನ ಚಾಲಕರು ಮಾಡಬಾರದು ಎಂದು ತಿಳಿಸಿದರು.

ನಗರದ ದೊಡ್ಡ ಆಲದ ಮರ, ವರಕೂಡು ಗೇಟ್, ಮೈಸೂರು ಹುಣಸೂರು ರಸ್ತೆ ಹಿನಕಲ್ ಜಂಕ್ಷನ್, ಬಂಡಿಪಾಳ್ಯ, ನಂಜನಗೂಡು ಎಪಿಎಂಸಿ ಹಾಗೂ ನಗರದ ಜೆಎಲ್‌ಬಿ ರಸ್ತೆ ಜಂಕ್ಷನ್‌ಗಳಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ಮೇ ತಿಂಗಳಿನವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸಿದ್ದು, ಇವುಗಳನ್ನು ಬ್ಲ್ಯಾಕ್ ಸ್ಪಾಟ್‌ಗಳಾಗಿ ಗುರುತಿಸಲಾಗಿದೆ. ಹೆಚ್ಚು ಅಪಘಾತ ಆಗುತ್ತಿರುವ ವಲಯಗಳನ್ನು ಗುರುತಿಸಿ ಎಚ್ಚರಿಕೆ ಬೋರ್ಡ್‌ಗಳನ್ನು ಹಾಕಬೇಕು. ಈ ಬ್ಲಾಕ್ ಸ್ಪಾಟ್‌ಗಳಲ್ಲಿ ಚಾಲಕರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ತಿಳಿಸಿದರು.

ದೊಡ್ಡ ವಾಹನಗಳನ್ನು ಚಾಲನೆ ಮಾಡುವವರು ಸಣ್ಣ ವಾಹನಗಳಿಗೆ ಚಲಿಸಲು ಅವಕಾಶ ಮಾಡಿಕೊಡಬೇಕು. ಮೆಟ್ರೋಪೋಲ್ ಸಿಗ್ನಲ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡುತ್ತಿದ್ದು ಸ್ವಲ್ಪ ಮುಂದೆ ಬಸ್‌ಗಳನ್ನು ನಿಲ್ಲಿಸಬೇಕು. ಈ ಸಂಬಂಧ ಒಬ್ಬ ಸಿಬ್ಬಂದಿ ನೇಮಿಸಿ ಕ್ರಮ ವಹಿಸುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೈಸೂರು ನಗರ ಸಂಚಾರಿ ವಿಭಾಗದ ಡಿಸಿಪಿ ಜಾಹ್ನವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು