News Karnataka Kannada
Saturday, April 27 2024
ಮೈಸೂರು

ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ

ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ  ಕಟ್ಟೆಚ್ಚರವಹಿಸಬೇಕು. ಜನ-  ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.
Photo Credit : By Author

ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ  ಕಟ್ಟೆಚ್ಚರವಹಿಸಬೇಕು. ಜನ-  ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಅಧಿಕಾರಿಗಳ, ವಿ.ಎ,  ಸರ್ವೆಯರ್ ಗಳ ಸಭೆ ನಡೆಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ- ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪರ್ಯಾಯ ತಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಿರ್ದೇಶನ ನೀಡಿದರು. ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕರ‍್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದು ಚಾಟಿ ಬೀಸಿದರು.

ಮನ್ರೇಗಾ, 15ನೇ ಹಣಕಾಸು ಆಯೋಗದ ಅನುದಾನ, ರಾಜ್ಯ, ಕೇಂದ್ರ ಸರ್ಕಾರದಿಂದ ಬರುವ ಅನುದಾನ  ಬಳಸಿಕೊಂಡು ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಬರಗಾಲ ನಿರ್ವಹಣೆಯೇ ನಿಮಗೆ ಮೊದಲ ಆದ್ಯತೆಯ ಕೆಲಸ ಆಗಬೇಕು. 15ನೇ ಹಣಕಾಸು ಆಯೋಗದಿಂದ ಬರುವ ಅನುದಾನದಲ್ಲಿ ನೀರಿನ ಕಾಮಗಾರಿಗಳಿಗೆ ಒತ್ತು ಕೊಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಶಿಕ್ಷಕರು ಆದ್ಯತೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಾಲಾ ಕಾಂಪೌಂಡ್, ಆಟದ ಮೈದಾನ ಹಾಗೂ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಆಯಾ ಗ್ರಾಮಗಳಲ್ಲೇ ಸರ್ಕಾರಿ ಜಾಗವನ್ನು ಕೂಡಲೇ ಗುರುತಿಸಬೇಕು ಎಂದು ದೇವೇಗೌಡ ಸೂಚಿಸಿದರು.

ತಾಪಂ ಆಡಳಿತಾಧಿಕಾರಿ ಸವಿತ, ತಹಸೀಲ್ದಾರ್ ಮಹೇಶ್, ತಾಲ್ಲೂಕು ಪಂಚಾಯಿತಿ ಇಒ ಗಿರಿಧರ್, ಎಡಿಎಲ್‌ಆರ್  ಚಿಕ್ಕಣ್ಣ ಸಭೆಯಲ್ಲಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು