Categories: ಮೈಸೂರು

ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ

ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ  ಕಟ್ಟೆಚ್ಚರವಹಿಸಬೇಕು. ಜನ-  ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಅಧಿಕಾರಿಗಳ, ವಿ.ಎ,  ಸರ್ವೆಯರ್ ಗಳ ಸಭೆ ನಡೆಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ- ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪರ್ಯಾಯ ತಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಿರ್ದೇಶನ ನೀಡಿದರು. ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕರ‍್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದು ಚಾಟಿ ಬೀಸಿದರು.

ಮನ್ರೇಗಾ, 15ನೇ ಹಣಕಾಸು ಆಯೋಗದ ಅನುದಾನ, ರಾಜ್ಯ, ಕೇಂದ್ರ ಸರ್ಕಾರದಿಂದ ಬರುವ ಅನುದಾನ  ಬಳಸಿಕೊಂಡು ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಬರಗಾಲ ನಿರ್ವಹಣೆಯೇ ನಿಮಗೆ ಮೊದಲ ಆದ್ಯತೆಯ ಕೆಲಸ ಆಗಬೇಕು. 15ನೇ ಹಣಕಾಸು ಆಯೋಗದಿಂದ ಬರುವ ಅನುದಾನದಲ್ಲಿ ನೀರಿನ ಕಾಮಗಾರಿಗಳಿಗೆ ಒತ್ತು ಕೊಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಶಿಕ್ಷಕರು ಆದ್ಯತೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಾಲಾ ಕಾಂಪೌಂಡ್, ಆಟದ ಮೈದಾನ ಹಾಗೂ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಆಯಾ ಗ್ರಾಮಗಳಲ್ಲೇ ಸರ್ಕಾರಿ ಜಾಗವನ್ನು ಕೂಡಲೇ ಗುರುತಿಸಬೇಕು ಎಂದು ದೇವೇಗೌಡ ಸೂಚಿಸಿದರು.

ತಾಪಂ ಆಡಳಿತಾಧಿಕಾರಿ ಸವಿತ, ತಹಸೀಲ್ದಾರ್ ಮಹೇಶ್, ತಾಲ್ಲೂಕು ಪಂಚಾಯಿತಿ ಇಒ ಗಿರಿಧರ್, ಎಡಿಎಲ್‌ಆರ್  ಚಿಕ್ಕಣ್ಣ ಸಭೆಯಲ್ಲಿ ಹಾಜರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

24 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

41 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

55 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago