News Karnataka Kannada
Friday, May 03 2024
ಮೈಸೂರು

ಮೈಸೂರಿನಲ್ಲೂ ಜೆಡಿಎಸ್ ನಾಯಕರ ಸಾಮೂಹಿಕ ರಾಜೀನಾಮೆ

JD(S) leaders resign en masse in Mysuru
Photo Credit : News Kannada

ಮೈಸೂರು: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್​​ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಮುಸ್ಲಿಂ ಸೇರಿದಂತೆ ಇತರೆ ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ನಿನ್ನೆ ಸುದ್ದಿಗೋಷ್ಠಿ ನಡೆಸಿ ಬಿಜೆಪಿಯೊಂದಿಗಿನ ಮೈತ್ರಿಯಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಧಕ್ಕೆ ಆಗಲು ಬಿಡುವುದಿಲ್ಲ ಎಂದು ಪಕ್ಷದ ಮುಸ್ಲಿಂ ನಾಯಕರಿಗೆ ಸಂದೇಶ ನೀಡಿದ್ದಾರೆ.

ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮುಸ್ಲಿಂ ನಾಯಕರು ಜೆಡಿಎಸ್​ಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮೈಸೂರು ನಗರದ ಎನ್​ಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಾಹಿದ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡು ಸಾಮೂಹಿಕವಾಗಿ ಜೆಡಿಎಸ್​ಗೆ ವಿದಾಯ ಹೇಳಿದ್ದು, ರಾಜೀನಾಮೆ ಪತ್ರವನ್ನು ಅಂಚೆ ಮೂಲಕ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು