ಮೈಸೂರು

ಕೆ.ಆರ್.ನಗರ: ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಣೆ

ಕೆ.ಆರ್.ನಗರ: ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ೩೪ ಗ್ರಾಮ ಪಂಚಾಯಿತಿಗಳಿಗೆ 1620 ಆಶ್ರಯ ಮನೆಗಳನ್ನು ಸರ್ಕಾರದ ವತಿಯಿಂದ ಮಂಜೂರು ಮಾಡಿಸಲಾಗಿದ್ದು ಪಂಚಾಯಿತಿಯವರು ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಡಿ.5ರ ಒಳಗೆ ಪಟ್ಟಿ ಮಾಡಿ ಅಂತಿಮಗೊಳಿಸಬೇಕು ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ದಿ ಅಧಿಕಾರಿಗಳ ಸಭೆಯಲ್ಲಿ ಈ ಹಿಂದೆ ಮಂಜೂರಾಗಿದ್ದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದ ಅವರು ಒಂದು ಪಂಚಾಯಿತಿಗೆ ಕನಿಷ್ಠ 20 ಮನೆಗಳನ್ನು ನೀಡಲಾಗಿದ್ದು ನಾನು ಸೂಚಿಸಿದ ಫಲಾನುಭವಿಗಳಿಗೂ ಆದ್ಯತೆ ನೀಡಬೇಕು ಎಂದರು.

ಅಧ್ಯಕ್ಷರು ಮತ್ತು ಸದಸ್ಯರುಗಳು ಜಾತಿ ಹಾಗೂ ಪಕ್ಷ ಮಾಡದೆ ಸೂರಿಲ್ಲದವರನ್ನು ಗುರುತಿಸಿ ಮನೆ ನೀಡಬೇಕು ಯಾವುದೇ ಕಾರಣಕ್ಕೂ ಅವರುಗಳಿಂದ ಹಣ ಪಡೆಯಬಾರದು, ಸರ್ಕಾರದ ಸವಲತ್ತು ನೀಡುವಾಗ ಲಂಚ ಪಡೆದರೆ ಅದು ಚುನಾಯಿತ ಸದಸ್ಯರಿಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದರು.

ಅಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಹಾನಿಗೆ ಒಳಗಾಗಿ ಮನೆ ಬಿದ್ದು ಹೋಗಿದ್ದು ಅವರಿಗೆ ಸರ್ಕಾರದ ವತಿಯಿಂದ 1ಲಕ್ಷ ರೂ ಪರಿಹಾರ ಕೊಡಿಸಲು ಪ್ರಯತ್ನಿಸಿದ ಅಧಿಕಾರಿಗಳು ಮತ್ತು ಆ ಭಾಗದ ಪಂಚಾಯಿತಿ ಸದಸ್ಯ 20 ಸಾವಿರ ರೂ ಲಂಚ ಪಡೆದಿರುವುದು ನನ್ನ ಗಮನಕ್ಕೆ ಬಂದಿದ್ದು ಅಲ್ಲಿನ ಗ್ರಾಮಲೆಕ್ಕಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಸೂಚಿಸಿದರು.

ನರೇಗಾ ಯೋಜನೆಯಡಿ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ಅಭಿವೃದ್ದಿ ಅಧಿಕಾರಿಗಳು ಮುಂದಾಗಬೇಕು ಎಂದು ಸಲಹೆ ನೀಡಿದ ಶಾಸಕರು ಕಾಮಗಾರಿಗಳನ್ನು ಆಯಾ ಪಂಚಾಯಿತಿ ಸದಸ್ಯರೇ ಮಾಡುತ್ತಿದ್ದಾರೆ ಇದರಿಂದ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಆದ್ದರಿಂದ ಸಂಬಂಧ ಪಟ್ಟ ನರೇಗಾ ಇಂಜಿನಿಯರ್ ಗುಣಮಟ್ಟದ ಕಾಮಗಾರಿ ಮಾಡಿಸಬೇಕು ಇಲ್ಲದಿದ್ದರೆ ನಿಮ್ಮ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಎಸ್.ಸಂತೋಷ್, ಇಒ ಹೆಚ್.ಕೆ.ಸತೀಶ್, ಪಂಚಾಯಿತಿ ಅಧ್ಯಕ್ಷರುಗಳಾದ ಹುಚ್ಚೇಗೌಡ, ನಂಜುಂಡ, ಸವಿತಾಕುಚೇಲ, ನಂದಿನಿರಮೇಶ್, ತ್ಯಾಗರಾಜು, ರಂಚಿತಾ, ಅನುಸೂಯಗಿರೀಶ್, ಹೆಚ್.ಆರ್.ದಿನೇಶ್ ಸೇರಿದಂತೆ ವಿವಿಧ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಪಿಡಿಒಗಳು ಹಾಜರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago