ಮೈಸೂರು

ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ: ತಾರಾ ಅನೂರಾಧ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಹಾಗೂ ನೀಲಗಿರಿ ಬೆಳೆಯ ನಿಷೇಧದ ನಡುವೆಯೂ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ ಲಾಭದತ್ತ ಸಾಗುತ್ತಿದ್ದು, ಇದಕ್ಕೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ತಾರಾಅನೂರಾಧ ತಿಳಿಸಿದರು.

ಬೆಂಗಳೂರಿನಲ್ಲಿರುವ ನಿಗಮದ ಪ್ರಧಾನ ಕಚೇರಿ ವನವಿಕಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2021 ರ ಜನವರಿಯಲ್ಲಿ ನಾನು ನಿಗಮದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಸಂಧರ್ಭದಲ್ಲಿ ಹಲವಾರು ಕಾರಣಗಳಿಂದ ನಿಗಮ ನಷ್ಟದತ್ತ ಸಾಗುತ್ತಿತ್ತು. 2017 ರಲ್ಲಿ ನೀಲಗಿರಿ ನಿಷೇಧದ ನಂತರ ನಿಗಮ ಆರ್ಥಿಕ ಪರಿಸ್ಥಿತಿ ಕ್ಷೀಣಿಸುತ್ತಾ ಬಂದಿತು. ಬ್ಯಾಂಕುಗಳಲ್ಲಿದ್ದ ಠೇವಣಿಯನ್ನು ಹಿಂಪಡೆದು ನಿಗಮವನ್ನು ನಿರ್ವಹಿಸಬೇಕಾಗಿದ್ದ ಪರಿಸ್ಥಿತಿ ಬಂದೊದಗಿತ್ತು. ನಿಶ್ವಿತ ಠೇವಣಿಯು 67.35 ಕೋಟಿ ರೂಪಾಯಿಗಳಿಗೆ ಇಳಿದಿತ್ತು. ಇಂತಹ ಸಂಕಷ್ಟದ ಸಮಯವನ್ನು ಸವಾಲಾಗಿ ತಗೆದುಕೊಂಡು ಹಲವಾರು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು.

ನಿಮಗದ ಅಧೀನದಲ್ಲಿರುವ ಕಾರ್ಯಕ್ಷೇತ್ರಗಳಿಗೆ ಭೇಟಿ ನೀಡಿದ ನಂತರ ಕಾರ್ಯಕ್ಷಮತೆಯಲ್ಲಿ ಹಲವಾರು ಬದಲಾವಣೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದಾಗಿ ನಿಗಮ ಲಾಭದತ್ತ ದಾಪುಗಾಲು ಹಾಕುತ್ತಿದೆ. ಸರಕಾರದ ಯಾವುದೇ ಅನುದಾನವಿಲ್ಲದೆ, ಒಂದುವರೆ ವರ್ಷದಲ್ಲಿ ನಿಶ್ಚಿತ ಠೇವಣಿ 100 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಈ ನಿಶ್ಚಿತ ಠೇವಣಿಯನ್ನು ಹಿಂದಕ್ಕೆ ತಗೆದುಕೊಳ್ಳಬಾರದು ಎನ್ನುವ ನಿರ್ಧಾರವನ್ನು ಮಂಡಳಿಯಲ್ಲಿ ತಗೆದುಕೊಂಡಿದ್ದೇವೆ ಎಂದು ಹೇಳಿದರು.

ಸರಕಾರವು ನೀಲಗಿರಿ ಬೆಳೆಸುವುದನ್ನು ನಿಷೇಧಿಸಿದ ನಂತರ ನಿಗಮದ ವತಿಯಿಂದ ಕ್ಯಾಸುರಿನ, ಹೆಬ್ಬೇವು ಮತ್ತು ಸುಬಾಬುಲ್ಗಳಂತಹ ಪರ್ಯಾಯ ಜಾತಿಯ ಮರಗಳನ್ನು ಬೆಳೆಸುವ ಕ್ರಮಗಳನ್ನು ಕೈಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಿಗಮದ ಅಡಿಯಲ್ಲಿ 40 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯಿದ್ದು, ಇನ್ನೂ 10 ಸಾವಿರ ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅರಣ್ಯ ಹೆಚ್ಚಿಸುವ ಹಾಗೂ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಅರಣ್ಯದ ಅಂಚಿನ ಭೂಮಿಯಲ್ಲಿ ಮರಗಳನ್ನು ನೆಡುವುದು ಹಾಗೂ ಅವುಗಳಿಂದ ಬರುವ ಉತ್ಪನ್ನಗಳ ಮೂಲಕ ಆರ್ಥಿಕ ಚಟುವಟಿಕೆಯನ್ನು ನಡೆಸುವುದು ನಮ್ಮ ಪ್ರಮುಖ ಕಾರ್ಯಚಟುವಟಿಕೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ನಿಗಮದ ಕಾರ್ಯಚಟುವಟಿಕೆಗಳಲ್ಲಿ ಇದ್ದಂತಹ ಲೋಪದೋಷಗಳನ್ನು ನಿವಾರಿಸಿದ್ದೇವೆ. ಹೊಸ ರೀತಿಯ ಟಾರ್ಗೆಟ್ ಬೇಸ್ಡ್ ಅಪ್ರೋಚ್ ಮೂಲಕ ನಿರಂತರವಾಗಿ ಗುರಿಯನ್ನು ತಲುಪುತ್ತಿದ್ದೇವೆ ಎಂದರು ಹೇಳಿದರು.

ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮಕ್ಕೆ ಸೇರಿದ ಅರಣ್ಯ ಪ್ರದೇಶ ಒತ್ತುವರಿ ಆಗದಂತೆ ರಕ್ಷಿಸುವುದು ಮತ್ತು ಒತ್ತುವರಿ ತಡೆಗಟ್ಟುವುದರ ಕುರಿತು ಹಲವಾರು ಸಭೆಗಳನ್ನು ನಡೆಸಿದ್ದು, ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಿದ್ದೇವೆ. ಇದೇ ವೇಳೆ ನೀಲಗಿರಿ ನಿಷೇಧದ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೂತನ ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

Sneha Gowda

Recent Posts

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

3 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

12 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

16 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

21 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

24 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

42 mins ago