Categories: ಮೈಸೂರು

ಮೈಸೂರು: ಭರ್ತಿಯತ್ತ ಕೆಆರ್ ಎಸ್ – ಕಬಿನಿ ಜಲಾಶಯಗಳು

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ (ಕೆಆರ್‌ಎಸ್) ಹಾಗೂ  ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್‌ಎಸ್‌ನಿಂದ 25 ಸಾವಿರದಿಂದ 75 ಸಾವಿರ ಕ್ಯೂಸೆಕ್‌ವರೆಗೆ ನದಿಗೆ ನೀರು ಬಿಡಲಾಗಿದೆ. ಈ ಪ್ರಮಾಣ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಅಭಿಯಂತರ ತಿಳಿಸಿದ್ದಾರೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವ  ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ  ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅಣೆಕಟ್ಟೆ ಭರ್ತಿಗೆ ಕೇವಲ 2 ಅಡಿ ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಭದ್ರತೆಯ ದೃಷ್ಟಿಯಿಂದ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ನದಿಗೆ ನೀರು ಹರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಭಾನುವಾರ 27753 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ನದಿ ಪಾತ್ರದ ಹಾಗೂ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ಹಾಗೂ ಯಾವುದೇ ಸಂದರ್ಭದಲ್ಲೂ ಅಣೆಕಟ್ಟೆಯಿಂದ ಇನ್ನು ಅಧಿಕ ನೀರು  ನದಿಗೆ ಬಿಡುವ ಸಾಧ್ಯತೆ ಕಾರಣ, ಪ್ರವಾಸಿಗರ ಹಿತದೃಷ್ಟಿಯಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ವಿ.ಕರಿಕಾಳನ್ ಸೂಚನೆ ಮೇರೆಗೆ ಶನಿವಾರದಿಂದಲೇ ದೋಣಿ ವಿಹಾರ  ಸ್ಥಗಿತಗೊಳಿಸಲಾಗಿದೆ. ಎಲ್ಲಾ ದೋಣಿಗಳನ್ನು ಸುರಕ್ಷಿತ ಸ್ಥಳದಲ್ಲಿ ಕಟ್ಟಿ ಹಾಕಲಾಗಿದ್ದು, ಮಳೆ ಹಾಗೂ ನದಿಯಲ್ಲಿ ನೀರಿನ ಪ್ರಮಾಣ ಕುಗ್ಗುವವರೆಗೂ ದೋಣಿಯಾನ ಆರಂಭಿಸದಂತೆ ಸೂಚನೆ ನೀಡಲಾಗಿದೆ. ಆದರೆ ರಂಗನತಿಟ್ಟು ಉದ್ಯಾನವನಕ್ಕೆ ಭೇಟಿ ನೀಡಬಹುದಾಗಿದೆ.

ರಂಗನತಿಟ್ಟು ಪಕ್ಷಿಧಾಮದ ಬಳಿ ನದಿಯಲ್ಲಿ ನೀರಿನ ಸ್ಥಿತಿಗತಿ ಪರಿಶೀಲಿಸುವಂತೆ ಆರ್‌ಎಫ್‌ಓ ಸಂತೋಷ್ ಹೂಗಾರ್,  ಡಿಆರ್‌ಎಫ್‌ಓ ಎಂ.ಪುಟ್ಟಮಾದೇಗೌಡ ಸೇರಿದಂತೆ ಪಕ್ಷಿಧಾಮದ ಸಿಬ್ಬಂದಿ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಪ್ರವಾಸಿಗರು ನದಿ ದಡದ ಬಳಿ ಹೋಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ದಿನದ 24 ಗಂಟೆಯೂ ನದಿಯಲ್ಲಿ ಹರಿಯುವ ನೀರಿನ ಪ್ರಮಾಣದ ಮೇಲೆ ಕಣ್ಣಿಟ್ಟಿರುವಂತೆ ಸೂಚನೆ ನೀಡಲಾಗಿದೆ.

ವೈಯನಾಡಿನಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ಭರ್ತಿಗೆ 1.3 ಅಡಿ ಬಾಕಿಯಿದೆ. 2284 ಅಡಿ ಸಾಮರ್ಥ್ಯದ ಕಬಿನಿ ಡ್ಯಾಂನಲ್ಲಿ ಪ್ರಸ್ತುತ 2282.66 ಅಡಿ ನೀರು ಶೇಖರಣೆಯಾಗಿದೆ. ಸದ್ಯ ನದಿಗೆ 26,583 ಕ್ಯೂಸೆಕ್ ಒಳಹರಿವು ಇದ್ದು, 25 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

Sneha Gowda

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

12 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago