News Karnataka Kannada
Friday, May 03 2024
ಮೈಸೂರು

ನಂಜನಗೂಡು: ಆಯತಪ್ಪಿ ಬಿದ್ದು ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

KSRTC conductor dies
Photo Credit : News Kannada

ನಂಜನಗೂಡು: ಕೆಎಸ್ ಆರ್ ಟಿ ಸಿ ಬಸ್ ನಲ್ಲಿ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

35 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. ಮೃತ ಮಹದೇವಸ್ವಾಮಿ ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ಹಳೇಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಶುಕ್ರವಾರ ಬೆಳಿಗ್ಗೆ 10 ಗಂಟೆಯ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ನಂಜನಗೂಡು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಲ್ಲನಮೂಲೆ ಮಠ ಬಳಿ ಬಸ್ ವೇಗವಾಗಿ ಸಂಚರಿಸಿದೆ. ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಮಹದೇವಸ್ವಾಮಿ ಆಯತಪ್ಪಿ ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು, ಕೊನೆ ಉಸಿರು ಎಳೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು