Categories: ಮೈಸೂರು

ಎಚ್.ಡಿ.ಕೋಟೆಯಲ್ಲಿ ಕಾಣಿಸಿಕೊಂಡ ಚಿರತೆ ಸೆರೆ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದ ಸ್ಟೇಡಿಯಂ ಬಡಾವಣೆ ಸೇರಿದಂತೆ ತಾಲ್ಲೂಕಿನ ಬೆಳಗನಹಳ್ಳಿ, ಬೋಪ್ಪನಹಳ್ಳಿ, ಜಕ್ಕಹಳ್ಳಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಣಿಸಿಕೊಂಡು ದನ ಕರು, ಆಡು ಕುರಿ, ಕೋಳಿ ಮೇಲೆ ಆಗಾಗ ದಾಳಿ ಮಾಡಿ ಜನರಲ್ಲಿ ಭಯದ ವಾತಾವರಣ ಸೃಷ್ಠಿಸಿದ್ದ ಎರಡು ಚಿರತೆಗಳಲ್ಲಿ ಮೂರು ವರ್ಷ ಪ್ರಾಯದ ಗಂಡು ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ.

ಕಳೆದ ಹದಿನೈದು ದಿನಗಳ ಹಿಂದೆ ಎಚ್.ಡಿ.ಕೋಟೆ ಪಟ್ಟಣದ ಸ್ಟೇಡಿಯಂ ಬಡಾವಣೆ ವನವಾಸಿ ಟ್ರಸ್ಟ್‌ನ ಹಾಸ್ಟೇಲ್ ಬಳಿ ಎರಡು ಚಿರತೆಗಳು ಬಂದು ಶ್ವಾನಗಳ ಮೇಲೆ ದಾಳಿ ಮಾಡಿ ಹೊತ್ತೊಯ್ಯುತ್ತಿದ್ದ ದೃಶ್ಯ ಹಾಸ್ಟೆಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದನ್ನು ಕಂಡ ಪಟ್ಟಣದ ಜನರು ಬಿಚ್ಚಿಬಿದ್ದಿದ್ದರು, ಈಗ ಚಿರತೆ ಸೆರೆಯಿಂದ ಪಟ್ಟಣದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ, ಸೆರೆಸಿಕ್ಕ ಚಿರತೆಯನ್ನು ಮೇಟಿಕುಪ್ಪೆ ವನ್ಯಜೀವಿ ವಲಯದ ಕಾಡಿಗೆ ಬಿಡಲಾಯಿತು.

ಚಿರತೆ ದಾಳಿಯಿಂದ ರೈತರಿಗೆ ನಷ್ಟ, ಸೂಕ್ತ ಪರಿಹಾರಕ್ಕಾಗಿ ತಪ್ಪದ ಅಲೆದಾಟ, ತಾಲ್ಲೂಕಿನ ಬೆಳಗನಹಳ್ಳಿ ಸಂತೋಷ್ ಹಾಗೂ ಬೋಪ್ಪನಹಳ್ಳಿ ಗ್ರಾಮದ ಅಶೋಕ್ ಅವರ ತೋಟದ ಮನೆಯಲ್ಲಿ ಕಟ್ಟಲಾಗಿದ್ದ ದನ ಕರು ಮೇಲೆ ದಾಳಿ ಮಾಡಿ ಮೇಕೆಯನ್ನು ತಿಂದಿದ್ದ ಚಿರತೆ ಕೊನೆಗೂ ಬೋಪ್ಪನಹಳ್ಳಿ ಆಶೋಕ್ ಅವರ ತೋಟದಲ್ಲಿ ಇರಿಸಿದ್ದ ಬೋನಿಗೆ ಬಿದ್ದಿದೆ, ಮತ್ತೊಂದು ಚಿರತೆಯ ಸೆರೆಗಾಗಿ ಆಶೋಕ್ ಅವರ ತೋಟದಲ್ಲೇ ಮತ್ತೆ ಬೋನು ಇಡಲಾಗುವುದು ಎಂದು ಎಚ್.ಡಿ.ಕೋಟೆ ಸಾಮಾಜಿಕ ವಲಯಾರಣ್ಯದ ಅಧಿಕಾರಿಗಳು ತಿಳಿಸಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

15 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

28 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

44 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

52 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago