News Karnataka Kannada
Sunday, May 05 2024
ಮೈಸೂರು

ಪಾಪ ಕಳೆಯಲು ಅಯೋಧ್ಯೆಗೆ ಹೋಗಿ ಬರಲಿ: ಪ್ರತಾಪ್ ಸಿಂಹ

ಹತ್ತು ವರ್ಷಗಳ ಕಾಲ ಸಂಸದನಾಗಿ ಕೆಲಸ ಮಾಡಲು ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ದ್ರೋಹ ಬಗೆಯಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
Photo Credit : By Author

ಮೈಸೂರು: ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ  ಶಿಷ್ಯರ ಜತೆಗೆ ಅಯೋಧ್ಯೆಗೆ ಹೋಗಿ ಬರಲಿ ಎಂದು ಸಂಸದ ಪ್ರತಾಪ್ ಸಿಂಹ ಕುಟುಕಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ನದು  ಯಾವ ಪಾತ್ರವೂ ಇಲ್ಲ. ಹೀಗಾಗಿ, ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಟೀಕಿಸಿದರು.

ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಅಡ್ವಾಣಿ. ಕೋರ್ಟ್ ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್.  ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಮೋದಿ. ಅಡ್ವಾಣಿ ಅವರಿಂದ ಮೋದಿವರೆಗೆ ರಾಮಜನ್ಮ ಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ನನ್ನ ತಮ್ಮನ ವಿಚಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಸತ್ಯ ಹೇಳಿದ್ದರು. ಈ ಕಾರಣ ಅವರಿಗೆ ಕೃತಜ್ಞತೆ  ಸಲ್ಲಿಕೆ ಮಾಡಲು ಅವರ ಮನೆಗೆ ತೆರಳಿದ್ದೆ. ನಾನು ಎರಡು ಬಾರಿ ಬಿಜೆಪಿ ಅಭ್ಯರ್ಥಿ ಆದರೂ ನಾನು ಆಲ್ ಪಾರ್ಟಿ ಕ್ಯಾಂಡಿಡೆಟ್. ಮೋದಿ ಅವರ ಬಗ್ಗೆ ಪ್ರೀತಿ ಇರುವವರು ಎಲ್ಲಾ ಪಕ್ಷದಲ್ಲೂ ಇದ್ದಾರೆ. ಅವರೆಲ್ಲಾ ನನಗೆ ಮತ ಹಾಕುತ್ತಿದ್ದರು ಎಂದರು.

ಡಾ.ಯತೀಂದ್ರ ಸಿದ್ದರಾಮಯ್ಯ ನಿಮ್ಮ ಎದುರಾಳಿಯ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ನಾನು  ಯಾವತ್ತೂ ನನ್ನ ಎದುರಾಳಿ ನೋಡಲ್ಲ. ಮೋದಿ ಅವರ ಹೆಸರಿನ ಮುಂದೆ ಯಾವ ಎದುರಾಳಿ ಹೆಸರೂ ನಡೆಯಲ್ಲ. ಕಾಂಗ್ರೆಸ್‌ಗೆ ನಮ್ಮ ಚಿಂತೆ, ಊರ ಉಸಾಬರಿ ಏಕೆ? ತಮ್ಮ ಅಭ್ಯರ್ಥಿ ಯಾರು ಎಂಬುದನ್ನು ನೋಡಿಕೊಳ್ಳಲಿ.

ಲೋಕಸಭೆಗೆ ಅಭ್ಯರ್ಥಿಗಳು ಇಲ್ಲದೆ ಮಂತ್ರಿಗಳ ನಿಲ್ಲಿಸುವ ದೈನೇಸಿ ಸ್ಥಿತಿ ಕಾಂಗ್ರೆಸ್‌ಗೆ ಬಂದಿದೆ. ಬಿಜೆಪಿ- ಜೆಡಿಎಸ್ ನಡುವೆ ಗೊಂದಲ ಇಲ್ಲ. ಈ ಕ್ಷೇತ್ರದಲ್ಲಿ ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ. ಡಾ.ಯತೀಂದ್ರ ಸಿದ್ದರಾಮಯ್ಯ ನನ್ನ ಎದುರಾಳಿಯಾದರೆ ಒಳ್ಳೆಯದು. ಡಾ. ಯತೀಂದ್ರ ಸನ್ ಆಫ್ ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ನಡುವೆ ಫೈಟ್ ನಡೆಯುತ್ತೆ ಎಂದು ತಿಳಿಸಿದರು.

ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ. ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ತಿರುಗೇಟು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು