Categories: ಮೈಸೂರು

ಸುತ್ತೂರು ಮಠಕ್ಕೆ ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಭೇಟಿ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಗರದ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ಆಶೀರ್ವಾದ ಪಡೆದರು.

ಮಠಕ್ಕೆ ಆಗಮಿಸಿದ ಯದುವೀರ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭದ ಸ್ವಾಗತ ಕೋರಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಶ್ರೀಗಳ ಆಶೀರ್ವಾದ ಪಡೆದರು. ಇದೇ ವೇಳೆ ಫಲತಾಂಬೂಲ ನೀಡಿ ಗೌರವಿಸಲಾಯಿತು. ನಂತರ ಶ್ರೀಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಯದುವೀರ್, ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆಯೂ ಚರ್ಚಿಸಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬರುವ ಕುರಿತು ನನಗೆ ಇನ್ನೂ ಮಾಹಿತಿ ಇಲ್ಲ ಎಂದು ಹೇಳಿದರು.

ಯಾರು ರಾಜ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಮುಖ್ಯಮಂತ್ರಿಗಳ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯಿಸಲಿ. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೆ ಎಂದರು.

ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಉಪ ಮೇಯರ್ ಶೈಲೇಂದ್ರ, ಮುಖಂಡರಾದ ಶಿವಕುಮಾರ್, ಫಣೀಶ್, ಕೃಷ್ಣಪ್ಪಗೌಡ, ಕೇಬಲ್ ಮಹೇಶ್ ಮೊದಲಾದವರು ಇದ್ದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

1 hour ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

1 hour ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago