News Karnataka Kannada
Friday, May 10 2024
ಮೈಸೂರು

ಮೈಸೂರಿನಲ್ಲಿ ಲೋಕಚುನಾವಣೆ ಸಿದ್ಧತೆಗೆ ಡಿಸಿ ಸೂಚನೆ

ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಪ್ರತಿಯೊಬ್ಬ ಅಧಿಕಾರಿಯು ಬಹಳ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾ
Photo Credit : News Kannada

ಮೈಸೂರು: ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಪ್ರತಿಯೊಬ್ಬ ಅಧಿಕಾರಿಯು ಬಹಳ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಎ.ಇ.ಒ, ವಿ.ವಿ.ಟಿ, ಎ.ಟಿ, ಇ.ಟಿ, ಐ.ಟಿ, ಎಂ.ಸಿ.ಎo.ಸಿ ತಂಡಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯು ಮಾರ್ಚ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿದ್ದು, ಅದಕ್ಕೆ ಕಟ್ಟು ನಿಟ್ಟಿನ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಅಧಿಕಾರಿಗಳನ್ನು ತಂಡಗಳನ್ನಾಗಿ ರೂಪಿಸಿ, ಕೆಲಸದ ಪಟ್ಟಿಯನ್ನು ನೀಡಲಾಗುತ್ತದೆ ಅದರನ್ವಯ ಕಾರ್ಯನಿರ್ವಹಿಸಬೇಕು ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯು ಕಳೆದ ಚುನಾವಣೆಗಳಿಗಿಂತ ವಿಭಿನ್ನವಾಗಿರಲಿದ್ದು ಶೇ.100 ರಷ್ಟು ನಮ್ಮ ಪ್ರಯತ್ನ ಹಾಕಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಎಚ್ಚರಿಕೆಯಿಂದ ಯಶಸ್ವಿಯಾಗಿ ಚುನಾವಣೆ ಪೂರ್ಣಗೊಳಿಸಬೇಕು. ಮಾದರಿ ನೀತಿ ಸಂಹಿತೆಯು ಚುನಾವಣೆ ಪ್ರಾರಂಭವಾಗಿ ಅದರ ಫಲಿತಾಂಶ ಪ್ರಕಟವಾಗುವವರೆಗೂ ಜಾರಿಯಲ್ಲಿರುವುದರಿಂದ ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ನಿರ್ಮಿಸಬೇಕು. ಕಳೆದಬಾರಿ ಇದ್ದ ಸ್ಥಳದಲ್ಲೇ ಚೆಕ್‌ ಪೋಸ್ಟ್ ನಿರ್ಮಿಸುವ ಬದಲು ಸೂಕ್ತ ಸ್ಥಳವನ್ನು ಆರಿಸಬೇಕು ಎಂದು ಸಲಹೆ ನೀಡಿದರು.

ಚುನಾವಣೆಯ ಅವಧಿಯಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳ್ಳಬೇಕು. ಅನಿವಾರ್ಯತೆ ಇರುವ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಇರುವ ಅನಾವಶ್ಯಕ ಹಾಗೂ ರಾಜಕೀಯಕ್ಕೆ ಸಂಬoಧಿಸಿದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು, ಸರ್ಕಾರಿ ಮತ್ತು ಅನುಧಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ, ಚುನಾವಣಾ ಸಭೆಗಳ ಸಂಬoಧಿಸಿದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದoತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಪಕ್ಕದ ಕ್ಷೇತ್ರದ ಚುನಾವಣಾ ಅಧಿಕಾರಿಗಳೊಡನೆ ಸೌಹಾರ್ದತೆಯಿಂದ ನಡೆದುಕೊಂಡು, ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದoತೆ ನೋಡಿಕೊಳ್ಳಬೇಕು. ಇದರಿಂದ ಸಾರ್ವಜನಿಕರಿಗೂ ಯಾವುದೇ ತೊಂದರೆಯಾಗಬಾರದು ಎಂದರು.

ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಪ್ರತಿ ನಿಮಿಷವೂ ಶ್ರದ್ದೆಯಿಂದ ಕಾರ್ಯನಿರ್ವಹಿಸಬೇಕು. ಸಣ್ಣ ನೆಪ ಹೇಳಿ ಗೈರಾಗುವುದು, ಕೆಲಸದ ಸಮಯದಲ್ಲಿ ಕಾಲ ಹರಣ ಮಾಡುವುದು ಕಂಡುಬoದಲ್ಲಿ ಅಂತಹವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ವಿ.ಶಿವರಾಜು ಸೇರಿದಂತೆ ಮತ್ತಿತರರು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು