News Karnataka Kannada
Tuesday, April 16 2024
Cricket
ಮೈಸೂರು

ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ: ಸಚಿವ ಮಹದೇವಪ್ಪ

ನಾನು ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ ಎಂದಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
Photo Credit : By Author

ಮೈಸೂರು: ನಾನು ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ ಎಂದಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸಿದ್ಧತೆ ನಡೆಯುತ್ತಿದೆ. ಆದರೆ, ಮಂತ್ರಿಗಳು ಸ್ಪರ್ಧಿಸಬೇಕೆಂದು ಚರ್ಚೆಯಾಗಿಲ್ಲ ಮತ್ತು ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವೂ ಇಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭರ್ಥಿಗಳ ಆಯ್ಕೆಯಾಗಲಿದ್ದು, ನಾನು ಲೋಕಸಭೆಗೆ ಅಭ್ಯರ್ಥಿಯಲ್ಲ. ನಾನು ಯಾರೇ ಅಭ್ಯರ್ಥಿ ಆದರೂ ಅವರ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದರು.

ನನ್ನ ಮಗ ಸುನೀಲ್ ಬೋಸ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ. ಸುನೀಲ್ ಬೋಸ್‌ಗೆ ಮೂರು ಬಾರಿಯೂ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಟ್ಟಿಲ್ಲ. ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ, ಧ್ರುವನಾರಾಯಣ್ ಅವರ ಹಠಾತ್ ನಿಧನದಿಂದಾಗಿ ಅವರ ಮಗ ದರ್ಶನ್‌ಗೆ ಟಿಕೆಟ್ ನೀಡಲು ಶಿಫಾರಸ್ಸು ಮಾಡಿದೆ. ಸ್ವತಃ ಸುನಿಲ್ ಬೋಸ್ ಕೂಡ ದರ್ಶನ್‌ಗೆ ಟಿಕೆಟ್ ಕೊಡಿ ಎಂದಿದ್ದ. ಹೀಗಾಗಿ ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ನಾನು ಯಾವುದೇ ಶಿಫಾರಸ್ಸು ಮಾಡಿಲ್ಲ. ಆದರೂ ಬೇಸರ ಮಾಡಿಕೊಳ್ಳದೇ ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇನೆ. ಸಹಜವಾಗಿಯೇ ಅವನಿಗಿಂತ ಕಿರಿಯರು, ಪಕ್ಷದ ಸದಸ್ಯರಲ್ಲದವರೂ ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದಾರೆ. ನಮ್ಮ ಪಕ್ಷದ ಸದಸ್ಯರಲ್ಲದ ಕಳಲೆ ಕೇಶವಮೂರ್ತಿ ಅವರನ್ನು ಕಾಂಗ್ರೆಸ್‌ಗೆ ಕರೆತಂದಾಗ, ನಂಜನಗೂಡು ಉಪ ಚುನಾವಣೆಯಲ್ಲಿ ಸುನಿಲ್ ಬೋಸ್ ಕೆಲಸ ಮಾಡಿ ಗೆಲ್ಲಿಸಿದ್ದಾನೆ ಎನ್ನುವ ಮೂಲಕ ಪರೋಕ್ಷವಾಗಿ ಸುನಿಲ್ ಬೋಸ್ ಪರ ಬ್ಯಾಟ್ ಬೀಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು