News Karnataka Kannada
Saturday, May 11 2024
ಮೈಸೂರು

ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಲು ಬಿಎಸ್ ವೈ ಕರೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದಲೂ ಪಕ್ಷವನ್ನು ಸಂಘಟನೆ ಮಾಡುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.
Photo Credit : By Author

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದಲೂ ಪಕ್ಷವನ್ನು ಸಂಘಟನೆ ಮಾಡುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲೆಯ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಂದು ಬೂತ್‌ಗಳಲ್ಲಿ ಪಕ್ಷವನ್ನು ಸಂಘಟಿಸಿ, ಪಕ್ಷ ಬಲಪಡಿಸಬೇಕು. ಆ ಮೂಲಕ ಪ್ರತಿ ಬೂತ್‌ನಲ್ಲೂ ಪಕ್ಷದ ಅಭ್ಯರ್ಥಿಗೆ ಶೇ.51ಕ್ಕಿಂತ ಹೆಚ್ಚು ಮತಗಳು ಬರುವಂತೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಸನ್ನದ್ಧರಾಗಬೇಕು. ಪ್ರತಿಯೊಂದು ಜಾತಿಯ ಮತಗಳು ಸಹ ಬಿಜೆಪಿಗೆ ಬರುವಂತೆ ಕಾರ್ಯಯೋಜನೆ ರೂಪಿಸಬೇಕಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆ, ಜನಪರ ಯೋಜನೆಗಳ ಕುರಿತಂತೆ ಜನರಿಗೆ ತಿಳಿಸುವ ಕೆಲಸವನ್ನು ಇಂದಿನಿಂದಲೇ ಆರಂಭಿಸಬೇಕಿದೆ ಎಂದು ತಿಳಿಸಿದರು.

ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಂದಿದ್ದರೂ, ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಗಿಂತ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನ ಬಂದಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಪ್ರತಿವರ್ಷ ಸರಾಸರಿ ಎಂಟು ಸಾವಿರ ಕೋಟಿ ಅನುದಾನ ನೀಡಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪ್ರತಿವರ್ಷ ಸರಾಸರಿ ೨೧ ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಹೀಗಿದ್ದರೂ ಕಾಂಗ್ರೆಸ್ ನಾಯಕರು ದಕ್ಷಿಣದ ರಾಜ್ಯಗಳಿಗೆ ತೆರಿಗೆ ಪಾಲು ನೀಡುವಾಗ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬ ಹಸಿ ಸುಳ್ಳಿನ ಆರೋಪ ಮಾಡುತ್ತಿದೆ. ಆ ಮೂಲಕ ಇಲ್ಲಸಲ್ಲದ ಆರೋಪ ಮಾಡುತ್ತಲೇ ಜನರನ್ನು ನಂಬಿಸಲು ಮುಂದಾಗಿದೆ. ಆದರೆ, ಕಾಂಗ್ರೆಸ್ಸಿಗರ ಈ ಪ್ರಯತ್ನಕ್ಕೆ ಬಿಜೆಪಿ ನಾಯಕರು, ಕಾರ್ಯಕರ್ತರು ಅವಕಾಶ ನೀಡದೆ, ಕಾಂಗ್ರೆಸ್ ಮಾಡುತ್ತಿರುವ ಸುಳ್ಳಿನ ಆರೋಪಗಳ ಕುರಿತಂತೆ ಅಂಕಿಅಂಶಗಳ ಸಮೇತ ಜನರಿಗೆ ಮನವರಿಕೆ ಮಾಡಿಕೊಡುವ ಜತೆಗೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿಅಂಶಗಳ ಬಗ್ಗೆಯೂ ಜನರಿಗೆ ತಿಳಿಸಬೇಕಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೌಟಿಲ್ಯ ರಘು ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯನ್ನು ಸದೃಢವಾಗಿ ಕಟ್ಟಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲಲಿದ್ದು, ಅವರು ಈ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಸ್ವಾತಂತ್ರ್ಯ ನಂತರ ತತ್ವ ಸಿದ್ದಾಂತ ಮೈಗೂಡಿಸಿಕೊಳ್ಳುವ ಮೂಲಕ, ಪಕ್ಷ ಮತ್ತು ಪಕ್ಷದ ಕಾರ್ಯಕರ್ತರನ್ನು ಸದೃಢವಾಗಿ ಕಟ್ಟಿದ ಪರಿಣಾಮ ಇಂದು ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದರು.

ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಚಿವರಾದ ಎಂ.ಶಿವಣ್ಣ, ಸಿ.ಎಚ್. ವಿಜಯಶಂಕರ್, ಮಾಜಿ ಶಾಸಕ ಹರ್ಷವರ್ಧನ್, ಮಾಜಿ ಎಂಎಲ್‌ಲ್ಸಿ ಸಿ.ರಮೇಶ್, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು