News Karnataka Kannada
Thursday, May 02 2024
ಮೈಸೂರು

ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಅಯ್ಯಪ್ಪ ಮಾಲಧಾರಿಗಳು ಸಾವು

ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳಿದಿರುವ ಘಟನೆ ನಡೆದಿದೆ.
Photo Credit : News Kannada

ನಂಜನಗೂಡು: ನಂಜನಗೂಡು ಪಟ್ಟಣದ ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳಿದಿರುವ ಘಟನೆ ನಡೆದಿದೆ.

ತುಮಕೂರು ಮೂಲದ ಗವಿ ರಂಗ (19)  ರಾಕೇಶ್ (19) ಹಾಗೂ ಅಪ್ಪು (16) ಅಯ್ಯಪ್ಪ ಮಾಲಧಾರಿಗಳು ಕಪಿಲಾ ನದಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.

ಅಯ್ಯಪ್ಪನ ದರ್ಶನ ಮುಗಿಸಿಕೊಂಡು ತಡರಾತ್ರಿ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡುವ ಸಲುವಾಗಿ ಆಗಮಿಸಿದ ಅಯ್ಯಪ್ಪ ಭಕ್ತರು ಸ್ನಾನಕ್ಕೆಂದು ಕಪಿಲಾ ನದಿಯ ಹೆಜ್ಜಿಗೆ ಸೇತುವೆಯ ಬಳಿ 5 ಜನ ಮಾಲಧಾರಿಗಳು ನೀರಿಗಿಳಿದು ಸುಳಿಗೆ ಸಿಲುಕಿದ ಪರಿಣಾಮ ಮೂವರು ಮೇಲೆಳಲಾಗದೆ ಮೃತಪಟ್ಟರೆ ಇಬ್ಬರು ಮಾಲಧಾರಿಗಳು ಜೀವ ರಕ್ಷಿಸಿಕೊಂಡಿದ್ದಾರೆ.

ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಇಬ್ಬರು ಮಾಲಧಾರಿಯ ಶವವನ್ನು ಹೊರ ತೆಗೆಯಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು