ನಂಜನಗೂಡು: ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ನಂಜನಗೂಡು ತಾ| ಕೊತ್ತನಹಳ್ಳಿ ಗ್ರಾಮದ ಓಂಕಾರ್ ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದನ್ನು ನಾಯಿಗಳು ಬೇಟೆಯಾಡಿವೆ. ನಾಯಿಗಳ ದಾಳಿಕೆ ಜಿಂಕೆ ಬಲಿಯಾಗಿದ್ದು, ನಾಯಿಗಳು ಭೇಟಿಯಾಡಿದ್ದ ಜಿಂಕೆಯನ್ನು ಕೊತ್ತನಹಳ್ಳಿ ಗ್ರಾಮದ 48 ವರ್ಷದ ಗಣೇಶ್, 32 ವರ್ಷದ ಕೃಷ್ಣ ಎಂಬುವವರು ಮಾಂಸವನ್ನು ಕತ್ತರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಗಣೇಶ್ ಎಂಬಾತನನ್ನು ಬಂಧಿಸಲಾಗಿದ್ದು, ಮತ್ತೋರ್ವ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ. ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯ ಮಾಂಸ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾಪತ್ತೆಯಾದ ವ್ಯಕ್ತಿಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಓಂಕಾರ್ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿಗಳು