News Karnataka Kannada
Monday, May 13 2024
ಮೈಸೂರು

ಅತ್ಯಾಚಾರ ಎಸಗಿದ ಆರೋಪಿಗೆ 10 ವರ್ಷ ಶಿಕ್ಷೆ

ಇತ್ತೀಚೆಗೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಿಜೆಪಿ ಯವರು ಖಾಸಗಿ ಎಫ್​ಎಸ್​ಎಲ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಅದರಲ್ಲೂ ಪಾಕ್​ ಪರ ಘೋಷಣೆ ಕೂಗಿದ್ದು ಪಕ್ಕಾ ಆಗಿತ್ತು. ಹೀಗಾಗೇ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
Photo Credit : News Kannada

ಮೈಸೂರು: ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಸೆರೆಮನೆ ವಾಸ ಹಾಗೂ 35 ಸಾವಿರ ರೂ., ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ಸಲ್ಮಾನ್ ಖಾನ್(20) ಶಿಕ್ಷೆಗೆ ಗುರಿಯಾದವ. ಈತ ಅದೇ ಗ್ರಾಮದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದರಿಂದ, ಸಂತ್ರಸ್ತೆ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಆರೋಪಿ ಮದುವೆಗೆ ನಿರಾಕರಿಸಿ ಮೋಸ ಮಾಡಿದ್ದರಿಂದ, ಈ ಬಗ್ಗೆ ಸಂತ್ರಸ್ತೆ ಆರೋಪಿಯ ವಿರುದ್ಧ ದೂರು ಸಲ್ಲಿಸಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿಯಾಗಿದ್ದ ಕೆ.ಸಿ.ಪೂವಯ್ಯ ಅವರು, ತನಿಖೆ ಪೂರೈಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ಬಗ್ಗೆ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಚಾರಣೆ ನಡೆಸಿ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೂರಕ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಎಂ.ರಮೇಶ್ ಆರೋಪಿಗೆ ಕಲಂ. 376(2) (ಎನ್) ಐಪಿಸಿ ರೀತ್ಯಾ 10 ವರ್ಷಗಳ ಕಠಿಣ ಸೆರೆಮನೆ ವಾಸ ಮತ್ತು 30 ಸಾವಿರ ರೂಪಾಯಿಗಳ ದಂಡ ಹಾಗೂ ಕಲಂ, 417 ಐಪಿಸಿ ರೀತ್ಯಾ ಒಂದು ವರ್ಷಗಳ ಸಾದಾ ಸೆರೆಮನೆ ವಾಸ ಮತ್ತು 5 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ, ದಂಡ ಮೊತ್ತದ 35 ಸಾವಿರ ರೂಪಾಯಿಗಳ ಪೈಕಿ 30 ಸಾವಿರ ರೂಪಾಯಿಗಳನ್ನು ಸಂತ್ರಸ್ತೆಗೆ ಪರಿಹಾರವನ್ನಾಗಿ ನೀಡುವಂತೆ, 5 ಸಾವಿರ ರೂಪಾಯಿಗಳನ್ನು ಸರಕಾರಕ್ಕೆ ದಂಡ ಪಾವತಿಸುವಂತೆ ತೀರ್ಪು ನೀಡಿದ್ದಾರೆ.

ಸಂತ್ರಸ್ತೆಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನಾತ್ಮಕ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಕೆ.ನಾಗರಾಜ ಅವರು ವಾದ ಮಂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು