Categories: ಮೈಸೂರು

ನಂಜನಗೂಡು: ಶ್ವೇತಪತ್ರ ಬಿಡುಗಡೆಗೊಳಿಸಿ ಚುನಾವಣಾ ಪ್ರಚಾರ ಆರಂಭಿಸಿದ ಶಾಸಕ ಬಿ.ಹರ್ಷವರ್ಧನ್

ನಂಜನಗೂಡು:  ತಾಲೂಕಿನ ದೇವನೂರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದಲ್ಲಿ ಶಾಸಕ ಬಿ.ಹರ್ಷವರ್ಧನ್ ಶ್ರೀ ಮಹಾಂತ ಸ್ವಾಮೀಜಿಗಳಿಂದ ಶ್ವೇತಪತ್ರ ಬಿಡುಗಡೆಗೊಳಿಸಿದರು.

ಶ್ರೀಗಳ ಆಶೀರ್ವಾದ ಪಡೆದು ಚುನಾವಣಾ ಪ್ರಚಾರಕ್ಕೆ ಕಾಲಿಟ್ಟಿದ್ದಾರೆ. ಬಳಿಕ ಶಾಸಕ ಹರ್ಷವರ್ಧನ್ ಮಾತನಾಡಿ, ಸುಮಾರು 823 ಕೋಟಿ ರೂ. ವೆಚ್ಚದ ಶ್ವೇತ ಪತ್ರವನ್ನು ಹೊರಡಿಸಿದ್ದೇನೆ. ನಾವು ಶ್ವೇತಪತ್ರವನ್ನು ಹೊರಡಿಸಿ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದೆ. ಅದರಂತೆ ಇಂದು ಶ್ವೇತ ಪತ್ರವನ್ನು ಬಿಡುಗಡೆ ಮಾಡಿದ್ದೇವೆ. ಏ‌.16 ರಂದು ಸುದ್ದಿಗೋಷ್ಠಿ ನಡೆಸಿ ಶ್ವೇತಪತ್ರದ ಬಗ್ಗೆ ವಿವರಿಸುತ್ತೇನೆ. ಈಗಾಗಲೇ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ನಗು ಏತ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ, ಶ್ರೀ ಕಂಠೇಶ್ವರಸ್ವಾಮಿ ದೇವಾಲಯಕ್ಕೆ ಅತಿಥಿ ಕೊಠಡಿಗಳ ನಿರ್ಮಾಣ, ಬೆಳ್ಳಿರಥ ನಿರ್ಮಾಣ ಹೇಗೆ ಇನ್ನಿತರ ಕಾಮಗಾರಿಗಳು ಪ್ರಗತಿಯಲ್ಲಿವೆ. ನಾನು ಮಾಡಬೇಕಿರುವ ಕೆಲಸಗಳು ಬಾಕಿ ಉಳಿದಿವೆ.

ಇಂದಿನಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದೇನೆ. ಇಲ್ಲಿಯ ತನಕ ಯಾವ ಶಾಸಕರು ಕೂಡ ಇಷ್ಟೊಂದು ಅನುದಾನ ತಂದು ಅಭಿವೃದ್ಧಿ ಮಾಡಿರಲಿಲ್ಲ. ಕ್ಷೇತ್ರದ ಜನರಿಗೆ ಇಂದು ನಾವು ಅಭಿವೃದ್ಧಿಯನ್ನು ತೆಗೆದುಕೊಂಡು ಹೋಗಿ ಮತ ಕೇಳುತ್ತಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯಾರಾದರೂ ಸ್ಪರ್ಧೆ ಮಾಡಬಹುದು. ದರ್ಶನ್ ಧ್ರುವನಾರಾಯಣ್ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಿದ್ದಾರೆ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಕ್ಷೇತ್ರದ ಮತದಾರರು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago