News Karnataka Kannada
Wednesday, May 08 2024
ಮೈಸೂರು

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದ್ದಾರೆ.
Photo Credit : News Kannada

ದೊಡ್ಡಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದ್ದಾರೆ.

ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 1.58 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಹಾಗೂ 16 ಲಕ್ಷ ರೂ. ವೆಚ್ಚದಲ್ಲಿ 3ನೇ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೈಟೆಕ್ ಪ್ರಯೋಗಾಲಯ, ಕೊಠಡಿಗಳ ನಿರ್ಮಾಣ ಹಾಗೂ ಶೌಚಾಲಯ ಸೇರಿದಂತೆ ನೂತನ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೈಟೆಕ್ ಅಂಗನವಾಡಿ ಕೇಂದ್ರವನ್ನು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಆದಷ್ಟು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು. ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೊಡ್ಡ ಕವಲಂದೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ ನೀಡಿದರು. ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಆಲಿಸಿರುವ ಶಾಸಕರು ಹೋಬಳಿ ಕೇಂದ್ರವಾಗಿರುವುದರಿಂದ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಮತ್ತು ಹೆರಿಗೆ ಮತ್ತು ಆಂಬುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಆರ್. ಸಿದ್ದರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷ ಪ್ರಶಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಗ್ರಾ‌.ಪಂ ಸದಸ್ಯರಾದ ನಸ್ರುಲ್ಲಾ ಖಾನ್, ಅಜಮುಲ್ಲಾ ಖಾನ್, ಮಂಜುನಾಥ್, ನವೀನ್, ಸಿದ್ದಲಿಂಗಪ್ಪ, ಮಾದಶೆಟ್ಟಿ, ಸುಮ, ಮಂಜುಳಾ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಜೀಮ್ ಉಲ್ಲಾ ಖಾನ್, ಪಿಡಿಒ ನಿರ್ಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು