News Karnataka Kannada
Sunday, May 05 2024
ಮೈಸೂರು

ಮೈಸೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ ಶಾಸಕ

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಸಂಸದ ಪ್ರತಾಪ್​ ಸಿಂಹಗೆ ಬೈಯುತ್ತಿರುವ ಭರದಲ್ಲೇ ಯತೀಂದ್ರ ಸಿದ್ದರಾಮಯ್ಯನವರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.
Photo Credit : News Kannada

ಮೈಸೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಸಂಸದ ಪ್ರತಾಪ್​ ಸಿಂಹಗೆ ಬೈಯುತ್ತಿರುವ ಭರದಲ್ಲೇ ಯತೀಂದ್ರ ಸಿದ್ದರಾಮಯ್ಯನವರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.

ಇದು ಯತೀಂದ್ರ ಸಿದ್ದರಾಮಯ್ಯನವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದಕ್ಕೆ ಪುಷ್ಟಿ ಸಿಕ್ಕಂತಾಗಿದೆ .

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಪ್ರದೀಶ್ ಈಶ್ವರ್, ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು. ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

ಇದರೊಂದಿಗೆ ಈ ಬಾರಿ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರು ಲೋಕಸಭೆಗೆ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕ ಬಂದಂತಾಗಿದೆ.

ಯತೀಂದ್ರ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುಳಿವನ್ನು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದರು. ಮತ್ತೊಂದೆಡೆ ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಯತೀಂದ್ರ ಅವರು ಕೂಡ ಇತ್ತೀಚೆಗೆ ಹೇಳಿದ್ದರು.

ಯತೀಂದ್ರ ಸಿದ್ದರಾಮಯ್ಯ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ. ಆದರೂ ಸಹ ಕೊನೆ ಕ್ಷಣದಲ್ಲಿ ಯತೀಂದ್ರ ಸಿದ್ದರಾಮಯ್ಯನವರೇ ಅಭ್ಯರ್ಥಿಯಾದರೂ ಅಚ್ಚರಿ ಪಡಬೇಕಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು