ಮೈಸೂರು: ಸಂಖ್ಯಾಶಾಸ್ತ್ರಕ್ಕೆ ಭಾರೀ ಒತ್ತು ಕೊಡುವ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.
ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು. ಎಂಎಲ್ಸಿ ಹೆಚ್ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಹೀಗೆ ಕೆಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಬದಲಾವಣೆ ತಂದುಕೊಂಡು ತಮ್ಮ ಅದೃಷ್ಟ ಕುಲಾಯಿಸಿಕೊಂಡಿದ್ದಾರೆ.