Categories: ಮೈಸೂರು

ಮೈಸೂರು: ಪ್ರಚಾರ ವಿಚಾರ ನಟ ಶಿವಣ್ಣಗೆ ಪ್ರತಾಪ್‌ಸಿಂಹ ಜಾಲತಾಣದಲ್ಲಿ ಟಾಂಗ್‌

ಮೈಸೂರು: ನಟ ಶಿವರಾಜ್ ಕುಮಾರ್ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ಶಿವಣ್ಣಗೆ ಟಾಂಗ್ ನೀಡಿದ್ದಾರೆ.

ದಿವಂಗತ ನಟ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಸಚಿವ ವಿ ಸೋಮಣ್ಣ ಆಸ್ಪತ್ರೆ ನಿರ್ಮಿಸಿದ್ದಾರೆ. ಈ ಆಸ್ಪತ್ರೆಯ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ರಾಘವೇಂದ್ರ ರಾಜ್‌ಕುಮಾರ್, ಸೋಮಣ್ಣ ಅವರ ಕಾರ್ಯವನ್ನು ಶ್ಲಾಘಿಸಿದ್ದರು. ಆದರೆ ಪುನೀತ್ ಸಹೋದರ ಶಿವರಾಜ್ ಕುಮಾರ್ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರತಾಪ್ ಸಿಂಹ ಗುರುವಾರ ಟ್ವೀಟ್ ಮಾಡಿ, “ಸೋಮಣ್ಣ, ಸಾವಿರಾರು ಜನರಿಗೆ ಅನುಕೂಲ ಮಾಡಿಕೊಡಲು ಪುನೀತ್ ರಾಜ್‌ಕುಮಾರ್ ಸರ್ ಹೆಸರಿನಲ್ಲಿ ಆಸ್ಪತ್ರೆ ನಿರ್ಮಿಸಿದ್ದರು. ಅವರ ಕಾರ್ಯವನ್ನು ರಾಘಣ್ಣ ಮೆಚ್ಚಿದ್ದರು.  ಆದರೆ ಶಿವಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರ ಮಾಡಿದರು ಎಂದು ತಿಳಿಸಿದ್ದಾರೆ.  ರಾಘಣ್ಣ ಸೋಮಣ್ಣನನ್ನು ಹೊಗಳಿರುವ ವಿಡಿಯೋ ಮತ್ತು ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು ಡಾ.ರಾಜ್ ಕುಟುಂಬವನ್ನು ರಾಜಕೀಯದ ಹೊರತಾಗಿ ನೋಡುತ್ತಾರೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದ್ದರು. ಆಗಲೂ ನಟ ಶಿವರಾಜಕುಮಾರ್ ಪ್ರಚಾರಕ್ಕೆ ಹೋಗಿರಲಿಲ್ಲ. ಡಾ. ರಾಜ್ ಕುಟುಂಬವನ್ನು ರಾಜಕೀಯವನ್ನು ಮೀರಿ ನೋಡುತ್ತಾರೆ ಎಂದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago