News Karnataka Kannada
Monday, April 29 2024
ಮೈಸೂರು

ಮೈಸೂರು: ಇ-ಚಲನ್ ದಂಡದ ಮೊತ್ತದಲ್ಲಿ 15 ದಿನಗಳವರೆಗೆ ಶೇ.50 ರಿಯಾಯಿತಿ

0% discount on e-challan fine amount for a period of 15 days
Photo Credit : By Author

ಮೈಸೂರು: ಸಂಚಾರ ಇ-ಚಲನ್ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಿಯಾಯಿತಿಯನ್ನು ರಾಜ್ಯ ಸರ್ಕಾರ ಕಲ್ಪಿಸಿದ್ದು, ಮಾ.4ರಿಂದ 15 ದಿನಗಳವರೆಗೆ ಸಾರ್ವಜನಿಕರು ದಂಡದಲ್ಲಿ ಶೇ.50 ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ಫೆ.11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50ರ ರಿಯಾಯಿತಿ ನೀಡಿ ಆದೇಶಿಸಿದೆ. ಈ ರಿಯಾಯಿತಿ ಮಾ.4ರಿಂದ ಅನ್ವಯವಾಗುವಂತೆ 15 ದಿನಗಳವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆಂದು ತಿಳಿಸಲಾಗಿದೆ.

ಈ ಆದೇಶದ ಹಿನ್ನೆಲೆಯಲ್ಲಿ ಮೈಸೂರು ನಗರದ ಸಂಚಾರ ಪೊಲೀಸರಿಂದ ಸಂಚಾರ ನಿಯಮ ಉಲ್ಲಂಘನೆಗಳ ಸಂಬಂಧ ದಾಖಲಿಸಿರುವ ಸಂಚಾರ ಇ-ಚಲನ್‌ಗಳ ದಂಡದ ಮೊತ್ತಕ್ಕೂ ಫೆ11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮಾ.4 ರಿಂದ 15 ದಿನಗಳವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ದಂಡದ ಮೊತ್ತದ ಶೇ.50 ರಿಯಾಯಿತಿ ದಂಡವನ್ನು ಪಾವತಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವ ಮೂಲಕ ಈ ಸದಾವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ದಂಡದ ಮೊತ್ತವನ್ನು ನಗರದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಆಯುಕ್ತರ ಕಚೇರಿಯ ಟ್ರಾಫಿಕ್ ಮೇನೇಜ್‌ಮೆಂಟ್ ಸೆಂಟರ್, ಶಿವರಾಂಪೇಟೆ ರಸ್ತೆಯಲ್ಲಿರುವ ಸಂಚಾರ ವಿಭಾಗದ ಎಸಿಪಿ ಕಚೇರಿ, ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ ಹಾಗೂ ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ದಂಡ ಪಾವತಿಸಬಹುದಾಗಿದೆ. ಸಾರ್ವಜನಿಕರು ದಂಡ ಪಾವತಿಸಿ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳುವಂತೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು