News Karnataka Kannada
Thursday, May 02 2024
ಮೈಸೂರು

ಮೈಸೂರು: ಅನಧಿಕೃತವಾಗಿ ಮದ್ಯ ಮಾರಾಟ ಮಾಡಿದರೆ ಕ್ರಮ

Action will be taken against those who sell liquor unauthorisedly.
Photo Credit : By Author

ಮೈಸೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು ಜಿಲ್ಲೆಯಲ್ಲಿ ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಬಕಾರಿ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್.ಡಿ.ಕೋಟೆ, ಸರಗೂರು ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ಪ್ರಕರಣಗಳು ಕಂಡುಬಂದರೆ ಕೂಡಲೇ ಕಾನೂನು ರೀತಿ ಕ್ರಮಕೈಗೊಳ್ಳಬೇಕು. ಪ್ರತಿದಿನ ಲಿಕ್ಕರ್ ಶಾಪ್‌ಗಳಿಗೆ ಭೇಟಿ ನೀಡಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಆಮಿಷವೊಡ್ಡಲು ಲಿಕ್ಕರ್ ಶಾಪ್‌ಗಳಲ್ಲಿ ಹಾಗೂ ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಜನರಿಗೆ ಲಿಕ್ಕರ್ ನೀಡಿ ಬೇರೆಯವರು ದುಡ್ಡು ಪಾವತಿ ಮಾಡುವ ಬಗ್ಗೆ ಗಮನಹರಿಸಿ. ಈ ಬಗ್ಗೆ ಬಾರ್ ಅಂಡ್ ರೆಸ್ಟೋರೆಂಟ್‌ಗಳ ಮಾಲೀಕರಿಗೆ ಸೂಚಿಸಬೇಕು ಎಂದು ತಿಳಿಸಿದರು.

ಅಬಕಾರಿ ಇಲಾಖೆ ವತಿಯಿಂದ ಚೆಕ್ ಪೋಸ್ಟ್‌ಗಳಲ್ಲಿ ಪರಿಶೀಲನೆ ಮಾಡಬೇಕು. ಮತದಾನದ ಮುಂಚೆ 48 ಗಂಟೆಗಳ ಒಣ ದಿನಗಳಲ್ಲಿ ಲಿಕ್ಕರ್ ನಿಷೇಧವಾಗುವ ಸಂಬಂಧ ಆ ದಿನಗಳಲ್ಲಿ ಅಬಕಾರಿ ಇಲಾಖೆ ಅಗತ್ಯ ಕ್ರಮ ವಹಿಸಬೇಕು ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ತಮ್ಮ ಇಲಾಖೆಯ ವತಿಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕೇರಳದಿಂದ ಬರುವ ಕಮರ್ಷಿಯಲ್ ವಾಹನಗಳ ಪರಿಶೀಲನೆ ಮಾಡಬೇಕು. ಅಂತರಾಜ್ಯ ಗಡಿ ಭಾಗದ ಚೆಕ್‌ಪೋಸ್ಟ್ ಸೇರಿದಂತೆ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ವಾಣಿಜ್ಯ ತೆರಿಗೆಗಳ ಇಲಾಖೆಯವರು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜನರಿಗೆ ಆಮಿಷವೊಡ್ಡಲು ಹಲವು ಬಗೆಯಲ್ಲಿ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿರುತ್ತವೆ. ಹೆಚ್ಚಿನ ಮೊತ್ತದ ನಗದು ಹಣ, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಮತ್ತಿತರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ, ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಸಾಮಗ್ರಿಗಳ ಸಾಗಣೆ ಬಗ್ಗೆ ಸಂಶಯ ಬಂದಲ್ಲಿ ಸಮಗ್ರವಾಗಿ ತಪಾಸಣೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಕೂಡಲೆ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಚೆಕ್‌ಪೋಸ್ಟ್‌ಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವುದರಿಂದ, ಸರದಿ ಆಧಾರದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಂಬಂಧಪಟ್ಟ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರವಿಶಂಕರ್, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಕಂಬಣ್ಣ ಹಾಗೂ ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಧಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು