ಮೈಸೂರು

ಮೈಸೂರು: ಜಂಬೂಸವಾರಿ ಮುಗಿಸಿ ಕಾಡಿಗೆ ತೆರಳಿದ ಗಜಪಡೆ

ಮೈಸೂರು: ನಾಡಹಬ್ಬ ದಸರಾದ ಜಂಬೂಸವಾರಿಯನ್ನು ಯಶಸ್ವಿಯಾಗಿ ಮುಗಿಸಿದ ಗಜಪಡೆ ತಮ್ಮ ಶಿಬಿರದತ್ತ ಮುಖ ಮಾಡಿದವು.

ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಆನೆಗಳು ಜಂಬೂ ಸವಾರಿ ಯಶಸ್ವಿಗೊಳಿಸಿದ ಖುಷಿಯಲ್ಲಿ ಒಲ್ಲದ ಮನಸ್ಸಿನಿಂದಲೇ ಕಾಡಿನತ್ತ ಪ್ರಯಾಣ ಬೆಳೆಸಿದ್ದು ಕಂಡು ಬಂದಿತು. ಅಂಬಾರಿ ಹೊತ್ತ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಲಾರಿಯಲ್ಲಿ ಕಳುಹಿಸಿಕೊಡಲಾಯಿತು. ಆದರೆ ಈ ವೇಳೆ ಕೆಲವು ಆನೆಗಳು ತಮ್ಮ ಸ್ವಸ್ಥಾನಕ್ಕೆ ಮರಳಲು ಹಿಂದೇಟು ಹಾಕಿದ್ದು ಕಂಡು ಬಂದಿತು.

ಪುರೋಹಿತ ಪ್ರಹ್ಲಾದರಾವ್ ನೇತೃತ್ವದಲ್ಲಿ ಅರಮನೆ ಮಂಡಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಪಾದಗಳನ್ನು ತೊಳೆದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಬೂದುಗುಂಬಳ ಒಡೆದು ದೃಷ್ಟಿ ತೆಗೆದು ಆನೆಗಳಿಗೆ ವಿವಿಧ ಹಣ್ಣು ಹಂಪಲು ಹಾಗೂ ಕಬ್ಬು ನೀಡಲಾಯಿತು. ಪೂಜೆ ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬ ವರ್ಗದವರಿಗೆ ಉಪಹಾರ ನೀಡಿ ಆನೆಗಳೊಂದಿಗೆ ಅವರನ್ನು ಬೀಳ್ಕೊಡಲಾಯಿತು. ಆನೆ ಶಿಬಿರದತ್ತ ಮರಳಿದ ಮಾವುತರು, ಕಾವಾಡಿಗಳಿಗೆ ಅರಮನೆ ಮಂಡಳಿಯಿಂದ ತಲಾ 10 ಸಾವಿರದಂತೆ 50 ಜನರಿಗೆ 5 ಲಕ್ಷ ಗೌರವಧನ ನೀಡಲಾಯಿತು.

ದಸರಾ ಮಹೋತ್ಸವಕ್ಕೆ ಎರಡು ತಂಡಗಳಲ್ಲಿ 14ಆನೆಗಳು ಮೈಸೂರಿಗೆ ಆಗಮಿಸಿದ್ದವು. ಹೋಗುವಾಗ 1 ಆನೆ ಹೆಚ್ಚಾಗಿ 15 ಆನೆಗಳು ತವರಿಗೆ ಮರಳಿದವು. ಲಕ್ಷ್ಮೀ ಆನೆ ದಸರಾಗೆ ಬರುವಾಗಲೇ ತುಂಬು ಗರ್ಭಿಣಿಯಾಗಿದ್ದರಿಂದ ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದ್ದಳು.

ಹೀಗಾಗಿ ಈ ಬಾರಿಯ ದಸರಾ ಹೆಚ್ಚು ವಿಶೇಷವಾಯಿತು. 14ಆನೆಗಳ ಪೈಕಿ ಮರಿಗೆ ಜನ್ಮ ನೀಡಿದ್ದ ಲಕ್ಷ್ಮೀ, ಅದರ ಮರಿ ಶ್ರೀದತ್ತಾತ್ರೇಯ ಹಾಗೂ ಚೈತ್ರ ಆನೆಯನ್ನು ಶುಕ್ರವಾರ ಮುಂಜಾನೆಯೇ ಲಾರಿಯಲ್ಲಿ ಕಳುಹಿಸಲಾಯಿತು. ಬಳಿಕ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಅರ್ಜುನ, ಧನಂಜಯ, ಗೋಪಾಲಸ್ವಾಮಿ, ಗೋಪಿ, ಪಾರ್ಥಸಾರಥಿ, ಸುಗ್ರೀವ, ಮಹೇಂದ್ರ, ಭೀಮ, ಶ್ರೀರಾಮ, ಕಾವೇರಿ, ವಿಜಯ ಆನೆಗಳನ್ನು ಲಾರಿಗೆ ಹತ್ತಿಸಿ ಆಯಾ ಆನೆಗಳ ಶಿಬಿರಗಳಿಗೆ ಕಳುಹಿಸಲಾಯಿತು.

ಅರಮನೆ ಆವರಣದಿಂದ ಹೊರಟ ಆನೆಗಳಿಗೆ ಮೈಸೂರಿನ ಜನತೆ ಭಾವನಾತ್ಮಕ ವಿದಾಯ ಹೇಳಿದರು. ರಸ್ತೆಯಲ್ಲಿದ್ದವರು ಕೈಬೀಸಿ ಆನೆಗಳಿಗೆ ಅಭಿನಂದನೆ ಸಲ್ಲಿಸಿ ಬೀಳ್ಕೊಟ್ಟರು.

Sneha Gowda

Recent Posts

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

2 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

3 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

26 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

35 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

41 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

48 mins ago