Categories: ಮೈಸೂರು

ಮೈಸೂರು: ಮಹಿಳೆಯರ ಆರೋಗ್ಯವನ್ನು ಹೆಚ್ಚಿಸಲು ಮೋಟಾರ್, ಸೈಕಲ್ ರ‍್ಯಾಲಿ

ಮೈಸೂರು: ಭಾರತ್ ಆಸ್ಪತ್ರೆ ಮತ್ತು ಇನ್‌ಸ್ಟಿಟ್ಯೂಟ್‌ ಆಫ್ ಆಂಕಾಲಾಜಿ (ಬಿಎಚ್‌ಐಒ) ವತಿಯಿಂದ ಮಹಿಳೆಯರ  ಆರೋಗ್ಯವನ್ನು ಸುಧಾರಿಸುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಒಂದು ತಿಂಗಳ ಕಾಲ ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದಲ್ಲದೇ, ಆಸ್ಪತ್ರೆಯ ವತಿಯಿಂದ ಮಾರ್ಚ್ 8 ರಂದು ಕಲಾಮಂದಿರದಲ್ಲಿ ಮೋಟಾರ್ ಸೈಕಲ್ ಮತ್ತು ಸೈಕಲ್ ರ‍್ಯಾಲಿ  ಆಯೋಜಿಸಲಾಗಿದೆ.

ಬಿಎಚ್‌ಐಒ ನ ವೈದ್ಯಕೀಯ ಅಧೀಕ್ಷಕಿ ಮತ್ತು ಹಿರಿಯ ವಿಕಿರಣ ಆಂಕಾಲಾಜಿಸ್ಟ್ ಡಾ.ವೈ.ಎಸ್. ಮಾಧವಿ ಮಾತನಾಡಿ, “ಭಾರತ್ ಆಸ್ಪತ್ರೆ ಮತ್ತು ಆಂಕೊಲಾಜಿ ಸಂಸ್ಥೆ ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡುವುದಲ್ಲದೆ ಮಹಿಳೆಯರ ಸಬಲೀಕರಣದಲ್ಲಿ ತೊಡಗಿಸಿಕೊಂಡಿದೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಎಚ್‌ಐಒ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 18 ಕ್ಕೂ ಹೆಚ್ಚು ಮಹಿಳೆಯರನ್ನು ಗೌರವಿಸುತ್ತದೆ, ಈ ತಿಂಗಳ ಉದ್ದಕ್ಕೂ ಉಚಿತ ನೋಂದಣಿ ಮತ್ತು ಸಮಾಲೋಚನೆ ಇರುತ್ತದೆ. ಮ್ಯಾಮೊಗ್ರಫಿ, ಅಲ್ಟ್ರಾಸೌಂಡ್, ಪ್ಯಾಪ್ಸ್ಮಿಯರ್‌ಗೆ ಶೇ.50ರಷ್ಟು ರಿಯಾಯಿತಿ ಇರುತ್ತದೆ. ಈ ಪರೀಕ್ಷೆಗಳಿಂದ ಪ್ರಾಥಮಿಕ ಹಂತದಲ್ಲಿ ಕ್ಯಾನ್ಸರ್‌ಗಳನ್ನು ಪತ್ತೆಹಚ್ಚಬಹುದು, ಇದು ಸಾಕಷ್ಟು ಜೀವಗಳನ್ನು ಉಳಿಸುತ್ತದೆ ಹಾಗೂ ಚಿಕಿತ್ಸೆಯನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡುತ್ತದೆ. ಭಾರತದಲ್ಲಿ ಮಹಿಳೆಯರಲ್ಲಿ ಸ್ತನ, ಗರ್ಭಕಂಠ, ಅಂಡಾಶಯ ಮತ್ತು ಗರ್ಭಾಶಯದ ಕ್ಯಾನ್ಸರ್ ಶೇ.70ರಷ್ಟು ಆಗಿದೆ.

ಪ್ರತಿಯೊಬ್ಬ ಮಹಿಳೆ ತನ್ನ ಆರೋಗ್ಯ ಮತ್ತು ಜೀವನಶೈಲಿಯ ಆಯ್ಕೆಗಳ ಬಗ್ಗೆ ಕಾಳಜಿ ವಹಿಸಬೇಕು. ಇದಕ್ಕಾಗಿ ನಿಯಮಿತ ಆರೋಗ್ಯ ತಪಾಸಣೆ ಅಗತ್ಯವಿದೆ. ಸಂಜೆ  5.30ಕ್ಕೆ ನಡೆಯುವ ಮೋಟಾರ್ ಸೈಕಲ್ ಮತ್ತು ಬೈಸಿಕಲ್ ಜಾಥಾ ನಂತರ ಸಾಧಕರಿಗೆ ಸನ್ಮಾನ ಮಾಡಿ ವೇದಿಕೆ ಕಾರ್ಯಕ್ರಮ ನಡೆಸುತ್ತೇವೆ ಎಂದರು.

ಸಮಾಜಶಾಸ್ತ್ರ ವಿಭಾಗದ ಮಾಜಿ ಎಚ್‌ಒಡಿ ಡಾ ಆರ್ ಇಂದಿರಾ, ಯುಒಎಂ ಮತ್ತು ಭಾಗ್ಯ ಅಜಯ್‌ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಬಿಎಚ್‌ಐಒ ಅಧ್ಯಕ್ಷ ಮತ್ತು ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಡಾ.ಬಿ.ಎಸ್.ಅಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊ: 9945433300 ಸಂಪರ್ಕಿಸಬಹುದು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago