Categories: ಮೈಸೂರು

ಮೈಸೂರು: ಯಶಸ್ವಿಯಾಗಿ ನಡೆದ ದಸರಾ ಸಿಡಿಮದ್ದಿನ ತಾಲೀಮು

ಮೈಸೂರು: ದಸರೆಗೆ ಬಂದಿರುವ ೪ ಹೊಸ ಆನೆಗಳು ಸೇರಿದಂತೆ ಎಲ್ಲಾ 14 ಆನೆಗಳಿಗೆ ಸಿಡಿಮದ್ದು ತಾಲೀಮನ್ನು ಯಶಸ್ವಿಯಾಗಿ ನಡೆಸಿದ್ದು, ಎಲ್ಲಾ ಆನೆಗಳು ಉತ್ತಮ ಪ್ರದರ್ಶನ ನೀಡಿವೆ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ಹೇಳಿದ್ದಾರೆ.

ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿಯ ಪಾರ್ಕಿಂಗ್ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದ ತಾಲೀಮಿನಲ್ಲಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದ 14ಆನೆಗಳಿಗೆ ಹಾಗೂ 44 ಆಶ್ವಗಳಿಗೆ 7 ಫಿರಂಗಿಗಳಲ್ಲಿ ಮೂರು ಸುತ್ತಿನಂತೆ ಒಟ್ಟು 21 ಕುಶಲತೋಪು ಸಿಡಿಸುವ ಮೂಲಕ ನಡೆದ ಭಾರಿ ಶಬ್ಧದ ತಾಲೀಮಿನ ಬಳಿಕ ಮಾತನಾಡಿದ ಅವರು, ಹೊಸ ಆನೆಗಳಾದ ಸುಗ್ರೀವ, ಪಾರ್ಥಸಾರಥಿ, ಶ್ರೀರಾಮ ಶೇರಿದಂತೆ ನಾಲ್ಕು ಆನೆಗಳು ಕೊಂಚ ಬೆದರಿದವು. ಉಳಿದ ಆನೆಗಳು ಉತ್ತಮ ಪ್ರದರ್ಶನ ನೀಡಿವೆ. ಅಶ್ವದಳದ ಕುದುರೆ ಬೆದರಿ ಆನೆಗಳತ್ತ ಬಂದ ಹಿನ್ನೆಲೆ ಆನೆಗಳು ಕೊಂಚ ವಿಚಲಿತವಾದವು. ಇದು ಪ್ರಾಣಿಗಳಲ್ಲಿ ಸಾಮಾನ್ಯ. ಎಲ್ಲಾ ಆನೆಗಳು ಆರೋಗ್ಯದಿಂದ ಇದ್ದು, ಸೆ.16ರಂದು 2ನೇ ಸಿಡಿಮದ್ದು ತಾಲೀಮು ಹಾಗೂ 23ರಂದು ಕೊನೆಯ ಸುತ್ತಿನ ತಾಲೀಮು ನಡೆಯಲಿದೆ ಎಂದು ಹೇಳಿದರು.

ಅರ್ಜುನನಿಗೆ 63ವರ್ಷ ವಯಸ್ಸಾಗಿದ್ದರೂ ಆತನನ್ನು ಕರೆತಂದಿದ್ದೇವೆ. ಏಕೆಂದರೆ ಆತ ಏಳೆಂಟು ಬಾರಿ ಅಂಬಾರಿ ಹೊತ್ತಿದ್ದಾನೆ. ಅವನಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಬಾರಿ ನಿಶಾನೆ ಆನೆಯಾಗಿ ಜಂಬೂ ಸವಾರಿಯನ್ನು ಮುನ್ನಡೆಸಲು ಅವಕಾಶ ನೀಡುತ್ತಿದ್ದೇವೆ. ನೌಪತ್ ಮತ್ತು ಸಾಲಾನೆಗಳಿಗೆ ಆನೆಗಳ ಪ್ರದರ್ಶನ ನೋಡಿಕೊಂಡು ತೀರ್ಮಾನಿಸಲಾಗುವುದು. ಶ್ರೀರಂಗಪಟ್ಟಣ ದಸರಾಗೆ 5 ಆನೆಗಳನ್ನು ಕೇಳಿ ಮಂಡ್ಯ ಜಿಲ್ಲಾಧಿಕಾರಿ ಮೈಸೂರು ಜಿಲ್ಲಾಧಿಕಾರಿಗೆ ಮತ್ತು ಅರಣ್ಯ ಇಲಾಖೆ ಸಿಸಿಎಫ್ ಅವರಿಗೆ ಪತ್ರ ಬರೆದಿದ್ದಾರೆ. ನಾವು 3 ಆನೆಗಳನ್ನು ಕಳಿಸುವ ಬಗ್ಗೆ ಚಿಂತನೆ ನಡೆಸಿದ್ದು, ಇನ್ನೂ ಅಂತಿಮವಾಗಿಲ್ಲ ಎಂದರು.

ಸಿಡಿಮದ್ದು ತಾಲೀಮಿನಲ್ಲಿ ಎಂದಿನಂತೆ ಈ ಬಾರಿಯೂ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಮತ್ತು ಮಾಜಿ ಕ್ಯಾಪ್ಟನ್ ಅರ್ಜುನ ಕೊಂಚವೂ ಬೆದರದೆ ಧೈರ್ಯ ಪ್ರದರ್ಶಿಸಿದವು. ಸಿಡಿಮದ್ದು ಸಿಡಿಸುತ್ತಿದ್ದಂತೆ ಹೊಮ್ಮಿದ ಭಾರೀ ಶಬ್ದಕ್ಕೆ ಎದೆ ಝಲ್ ಎಂದರೂ ಈ ಆನೆಗಳು ಬೆಚ್ಚಲಿಲ್ಲ. ಬದಲಿಗೆ ಜಂಬೂ ಸವಾರಿಯಂದು ಸಿಡಿಮದ್ದು ಸಿಡಿಸುತ್ತಿದ್ದಂತೆ ಮುಂದಡಿಯಿಡುವ ಅಭ್ಯಾಸವಾಗಿ ಅಂತೆಯೇ ಮುಂದಕ್ಕೆ ಹೆಜ್ಜೆ ಹಾಕಿದವು. ಇದೇ ಮೊದಲ ಬಾರಿಗೆ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವ ಮಹೇಂದ್ರ ಆನೆ ಬೆಚ್ಚದೆ ತಾಲೀಮು ಯಶಸ್ವಿಗೊಳಿಸಿದೆ.

ಆದರೆ ಸಿಡಿಮದ್ದು ತಾಲೀಮಿನ ವೇಳೆ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಶ್ವದಳ ಕುದುರೆಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅಶ್ವದಳದ ಕುದುರೆಯೊಂದು ಗಾಬರಿಗೊಂಡು ಆನೆಗಳತ್ತ ಸಾಗಿತು. ಇದರಿಂದ ವಿಚಲಿತಗೊಂಡ ಆನೆಗಳು ಘೀಳಿಟ್ಟವು. ಇದರಿಂದ ಕೆಲಕ್ಷಣ ಆಂತಕದ ವಾತಾವರಣ ಸೃಷ್ಟಿಯಾಯಿತು. ಆನೆಗಳು ಮತ್ತಷ್ಟು ಹೆದರದಂತೆ ಮಾವುತ, ಕಾವಾಡಿಗಳು ಆನೆಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago