ಮೈಸೂರು

ಮೈಸೂರು: ಶಾಲಾ ದಿನಗಳಿಂದಲೇ ಸಂಚಾರ ನಿಯಮ ಕಲಿಯುವುದು ಅಗತ್ಯ

ಮೈಸೂರು: ಶಾಲಾ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಚಾರ ಹಾಗೂ ಸರ್ಕಾರದ ನಿಯಮಗಳನ್ನು ಪಾಲಿಸುವುದನ್ನು ಕಲಿಯಬೇಕು. ಇಲ್ಲವಾದರೆ ಭವಿಷ್ಯದಲ್ಲಿ ನಿಮಗೆ ಕಾನೂನು ಪಾಲನೆಯ  ಶಿಸ್ತು ಮೂಡುವುದು ಕಷ್ಟವಾಗುತ್ತದೆ ಎಂದು ಕೃಷ್ಣರಾಜ ಸಂಚಾರ ಠಾಣೆಯ  ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ವೆಂಕಟೇಶ್ ಹೇಳಿದರು.

ನಗರದ ಕುವೆಂಪುನಗರದಲ್ಲಿರುವ ಕಾವೇರಿ ವಿದ್ಯಾ ಸಂಸ್ಥೆ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ವತಿಯಿಂದ ಹಮ್ಮಿಕೊಂಡಿದ್ದ ಸಂಚಾರ ನಿಯಮಗಳ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿಪಾಲ್ಗೊಂಡು  ಅವರು ಮಾತನಾಡಿ,ವಿದ್ಯಾರ್ಥಿಗಳಾದ ನಿಮಗೆ ಸಂಚಾರ ನಿಯಮಗಳ ಸ್ಪಷ್ಟ ಅರಿವಿರುತ್ತದೆ. ಹೀಗಿದ್ದರೂ  ನಿಯಮಗಳನ್ನು ಪಾಲಿಸುವುದಿಲ್ಲ. ಸಿಗ್ನಲ್ ಜಂಪ್, ಮೂವರು ಕುಳಿತು ವಾಹನ ಚಾಲನೆ ಮಾಡುವುದು, ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿರುತ್ತೀರಿ. ನಿಮ್ಮ ನಡೆ ಸರಿಯೇಎಂದು ಯೋಚಿಸಿ ಎಂದರು.

ಪೋಷಕರು ನೀವು ಚೆನ್ನಾಗಿ ಓದಲಿ, ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತೆರಳಲಿ ಎಂಬ ಉದ್ದೇಶದಿಂದ  ವಾಹನ ಕೊಡಿಸಿರುತ್ತಾರೆ. ಆದರೆ, ನೀವು ಕಾಲೇಜಿಗೆ ತೆರಳುವ ಬದಲು ಮೂವರು ಸ್ನೇಹಿತರನ್ನು ಒಂದೇ  ವಾಹನದಲ್ಲಿ ಕುಳ್ಳಿರಿಸಿಕೊಂಡು ನಗರ ಪ್ರದಕ್ಷಣೆ ಹಾಕುತ್ತೀರಿ. ಇಂತಹ ಸಂದರ್ಭದಲ್ಲಿ ಅಪಘಾತವಾದಲ್ಲಿ  ನಿಮ್ಮ ಹಾಗೂ ನಿಮ್ಮ ಸ್ನೇಹಿತರ ಕುಟುಂಬ ಸಂಕಷ್ಟಕ್ಕೊಳಗಾಗುತ್ತದೆ ಎಂಬುದರ ಅರಿವು ನಿಮಗಿರಬೇಕು ಎಂದು ಹೇಳಿದರು.

ಇನ್ನು ವಾಹನ ಚಾಲನಾ ಪರವಾನಗಿ ಪಡೆಯದೇ ಕೆಲವರು ವಾಹನ ಚಾಲನೆ ಮಾಡುತ್ತೀರಿ. ಇದು  ಕಾನೂನಿನ ಪ್ರಕಾರ ಅಪರಾಧ. ಒಂದು ವೇಳೆ ಅಪಘಾತ ಸಂಭವಿಸಿದಲ್ಲಿ ನೀವು ಮಾಡಿದ ತಪ್ಪಿಗೆ ನಿಮ್ಮ ಪೋಷಕರು ದಂಡ ತೆರಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ವಾಹನ ಮಾಲೀಕರಿಗೆ 6 ತಿಂಗಳ ಸಜೆ ಅಥವಾ 25 ಸಾವಿರ ರೂ.ವರೆಗೂ ದಂಡ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಎಚ್ಚರಿಕೆ  ನೀಡಿದರು.

ನೀವುಗಳು ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ನಾವು ದಂಡ ವಿಧಿಸುತ್ತೇನೆ. ಈ ಕಾರಣಕ್ಕೆ ಕೆಲವರು  ನಮ್ಮ ಮೇಲೆ ಬೇಸರ ವ್ಯಕ್ತಪಡಿಸುತ್ತಾರೆ. ಆ ಹಣವನ್ನು ನಾವು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ. ಸರ್ಕಾರ ಸೂಚನೆ ನೀಡಿದಂತೆ ನಾವು ಕೆಲಸ ಮಾಡಬೇಕು. ನಿಯಮಗಳನ್ನು ಪಾಲಿಸಿದಲ್ಲಿ ಯಾರೂ ಕೂಡ ನಿಮಗೆ ದಂಡ ವಿಧಿಸಲು ಸಾಧ್ಯವಾಗುವುದಿಲ್ಲ ಎಂದರು.

Ashika S

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

21 seconds ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

6 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

14 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

31 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

32 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

43 mins ago