News Karnataka Kannada
Friday, May 10 2024
ಮೈಸೂರು

ಮೈಸೂರು: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ. ಎಚ್.ಆರ್. ತಿಮ್ಮೇಗೌಡ ಆಯ್ಕೆ

Karnataka Janapada Parishat President Dr. H.R. Thimmegowda selected
Photo Credit : By Author

ಮೈಸೂರು: ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’, ‘ಕೋಳಲದನಿ’, ‘ಸಂವೇದನೆ’, ‘ಭಾರತೀಯ ಕಾವ್ಯಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ’, ‘ಸಂಕ್ಷಿಪ್ತ ಶಬ್ದಮಣಿದರ್ಪಣ’, ‘ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ.

ಇವರಿಗೆ ‘ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರಶಸ್ತಿ’, ‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು