Categories: ಮೈಸೂರು

ಮೈಸೂರು: ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಮೈಸೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಕೋಟಿ ಕಂಠ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಚರಿಸಲಾಯಿತು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಕನ್ನಡದ ನೆಲ, ಜಲವನ್ನು ಉಳಿಸಿ, ಕನ್ನಡವನ್ನು ಪ್ರೀತಿಸಿ, ಅನ್ಯ ಭಾಷೆಯ ಬಂಧುಗಳಿಗೂ ಕನ್ನಡವನ್ನು ಕಲಿಸಿ, ಕನ್ನಡ ಮಾತನಾಡುವುದನ್ನು ಬೆಳಸಿ, ಗೌರವಿಸುವ, ಮತ್ತು ಪ್ರೀತಿಸುವ ಮನೋಧರ್ಮವನ್ನು ನಾಡಿನಾದ್ಯಂತ ಪಸರಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸರ್ಕಾರದ ಈ ಕಾರ್ಯಕ್ರಮ ಕನ್ನಡ ಭಾಷೆಯ ಸ್ವಾಭಿಮಾನವನ್ನು ಮೆರೆಸುವ ಮತ್ತು ನಾಡು ನುಡಿಯ ಬೆಳವಣಿಗೆಗೆ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಅಭಿಯಾನವಾಗಿದೆ ಎಂದು ಶ್ಲಾಘಿಸಿದರು. ಕನ್ನಡ ಭಾಷೆಯನ್ನು ದೈನಂದಿನ ಚಟುವಟಿಕೆಗಳಲ್ಲಿ ಹಾಗೂ ವ್ಯವಹಾರದಲ್ಲಿ ಕಡ್ಡಾಯವಾಗಿ ಬಳಸುವ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ನಂತರ ಕನ್ನಡ ನಾಡು ನುಡಿಯನ್ನು ಬಿಂಬಿಸುವ ರಾಷ್ಟçಕವಿ ಕುವೆಂಪು, ಶ್ರೀ ಹುಯಿಲಗೋಳ ನಾರಾಯಣರಾಯರು, ಡಾ. ಡಿ.ಎಸ್. ಕರ್ಕಿ, ಶ್ರೀ ಚನ್ನವೀರ ಕಣವಿ ಮತ್ತು ಖ್ಯಾತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧ್ಯಾಪಕರು ಹಾಗೂ ಅಧ್ಯಾಪಕೇತರರು ಸುಶ್ರಾವ್ಯವಾಗಿ ಹಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು ಮತ್ತು ಶೈಕ್ಷಣಿಕ ಸಲಹೆಗಾರರಾದ ಡಾ. ಎಸ್.ಆರ್. ರಮೇಶ್, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್.ಆರ್. ತಿಮ್ಮೇಗೌಡ ಅವರುಗಳು ಉಪಸ್ಥಿತರಿದ್ದರು.

ಸಹಾಯಕ ಕನ್ನಡ ಪ್ರಾಧ್ಯಾಪಕರಾದ ಶ್ರೀ ನಾಗೇಶ ಎಂ ಅವರು ಸ್ವಾಗತಿಸಿದರು. ಬಿಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸುನಿಲ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಲೇಜಿನ ಅಧ್ಯಾಪಕ ಹಾಗೂ ಅಧ್ಯಾಪಕೇತರ ವರ್ಗದವರು, ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Sneha Gowda

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

13 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

31 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

46 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago