News Karnataka Kannada
Monday, April 29 2024
ಮೈಸೂರು

ಮೈಸೂರು: ದಸರಾಕ್ಕೆ ರಾಷ್ಟ್ರಪತಿ ಆಗಮನ, ಚಾಮುಂಡಿಬೆಟ್ಟಕ್ಕೆ ಸೂಕ್ತ ಭದ್ರತೆ

Mysore (1)
Photo Credit : By Author

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದಲ್ಲದೆ ಸೂಕ್ತ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ.

ಸಭಾ ವೇದಿಕೆಯ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಸ್ಥಳದ ಲಭ್ಯತೆಗೆ ಅನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ೧೫೦೦-೨೦೦೦ ಜನರು ಸೇರುವಷ್ಟು ಸ್ಥಳಾವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.

ಬಳಿಕ ದೇವಸ್ಥಾನದ ಪಾರ್ಕಿಂಗ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳು, ಫುಡ್‌ಕೋರ್ಟ್‌ಗೆ ಭೇಟಿ ಕೊಟ್ಟರು.

ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು