Categories: ಮೈಸೂರು

ಮೈಸೂರು: ಅಕ್ಷರ ಸಂಸ್ಕೃತಿಗೂ ಮುನ್ನವೇ ‘ದಿನದರ್ಶಿಕೆ’ ಪರಿಕಲ್ಪನೆ ಇತ್ತು- ಬನ್ನೂರು ರಾಜು

ಮೈಸೂರು: ದಿನದರ್ಶಿಕೆ ಅಥವಾ ಕ್ಯಾಲೆಂಡರ್ ಎಂಬುದು ನಮ್ಮಲ್ಲಿ ಅಕ್ಷರ ಸಂಸ್ಕೃತಿಗೂ ಮೊದಲೇ ಇದ್ದು ಅದು ಕಾಲಕ್ಕೆ ತಕ್ಕಂತೆ ಆಯಾ ಕಾಲಘಟ್ಟಗಳಲ್ಲಿ ತಂತ್ರಜ್ಞಾನದೊಡನೆ ಬೆಳೆದು ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಬಹು ವರ್ಣಮಯವಾಗಿ ವಿವಿಧ ರೂಪಗಳಲ್ಲಿ ಜನಾಕರ್ಷಣೀಯವಾಗಿದೆ ಎಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು.

ನಗರದ ಕುವೆಂಪು ನಗರದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಆವರಣದಲ್ಲಿ ಆಯೋಜಿಸಿದ್ದ 2023 ರ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಓರ್ವ ವ್ಯಕ್ತಿ ಮಾಡಲಾಗದ್ದನ್ನು ಒಂದು ಸಂಘ ಮಾಡಬಲ್ಲದು ಹಾಗಾಗಿ ಸಂಘ ಶಕ್ತಿ ಅದರಲ್ಲೂ ವಿಶೇಷವಾಗಿ ಕಾರ್ಮಿಕ ಶಕ್ತಿ ಬಹುದೊಡ್ಡದೆಂದೂ, ಇಂಥ ಶಕ್ತಿಯಿಂದ ಸಮಾಜದ ಕ್ಷೇಮಾಭಿವೃದ್ಧಿ ಸಾಧ್ಯವೆಂದರು.

ಆದರ್ಶನೀಯ ಶ್ರೇಷ್ಠ ವ್ಯಕ್ತಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿರುವ ಈ ಸಂಘವು ತನ್ನದೇ ಆದ ಸಂಘಟನೆಯಿಂದ ನಿಸ್ವಾರ್ಥ ಜನೋಪಯೋಗಿ ಕಾರ್ಯಗಳನ್ನು, ಸಮಾಜಾಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಒಂದು ವಿಶಿಷ್ಟ ಸಂಸ್ಥೆಯಾಗಿದೆ. ಮಹನೀಯರ ಜಯಂತಿ ಮತ್ತು ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಗಳು ಸೇರಿದಂತೆ ಸಾಮಾಜಿಕ ಅನಿಷ್ಟಗಳು ಹಾಗೂ ಅವುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಜನಜಾಗೃತಿಯ ಕಾರ್ಯಕ್ರಮಗಳನ್ನು ಮಾಡುತ್ತಿರುವ ಒಂದು ಅಪರೂಪದ ಕಾರ್ಮಿಕ ಸಂಘಟನೆ ಇದಾಗಿದ್ದು ಇತರೆ ಸಂಘ-ಸಂಸ್ಥೆಗಳಿಗೆ ಇದು ಮೇಲ್ಪಂಕ್ತಿಯಾಗಿ ಮಾದರಿಯಾಗಿದೆ ಎಂದರು.

ಕ್ಯಾಲೆಂಡರ್ ಅಥವಾ ದಿನದರ್ಶಿಕೆ ಎಂಬುದು ಇಂದು ನಿನ್ನೆಯದಲ್ಲ. ಇದಕ್ಕೆ ಸುದೀರ್ಘವಾದ ಪ್ರಾಚೀನ ಇತಿಹಾಸವಿದೆ. ಭಾರತೀಯ ಸಂಸ್ಕೃತಿಯಲ್ಲಿ ಇದು ಹಾಸು ಹೊಕ್ಕಾಗಿದ್ದು ನಮ್ಮ ಪರಂಪರೆಯಲ್ಲಿ ಇದಕ್ಕೊಂದು ವಿಶಿಷ್ಟ ಸ್ಥಾನವಿದ್ದು ದಿನಗಣನೆ ಯ ಕಾಲಜ್ಞಾನದ, ಕಾಲ ಪ್ರಜ್ಞೆಯ ಪ್ರತೀಕವಾಗಿದೆ. ಗೋಡೆಯಲ್ಲಿದ್ದುಕೊಂಡೇ ನಮ್ಮನ್ನು ಪ್ರತಿದಿನವೂ ಎಚ್ಚರಗೊಳಿಸುವ ಒಂದು ವಿಶಿಷ್ಟ ಸಾಧನ ದಿನದರ್ಶಿಕೆ. ಕಳೆದು ಹೋದ ನಂತರ ಮತ್ತೆ ಮರಳಿ ಬಾರದ ವಸ್ತುವೆಂದರೆ ಅದು ಕಾಲ. ಹಾಗಾಗಿ ಪ್ರತಿಯೊಬ್ಬರೂ ಅದರಲ್ಲೂ ವಿಶೇಷವಾಗಿ ಕಾರ್ಮಿಕರು ಕಾಲದ ಬೆಲೆಯನ್ನು ಬಲ್ಲವರಾಗಿರಬೇಕು. ಇಂತಹ ಅಮೂಲ್ಯವಾದ ಕಾಲದ ಬೆಲೆಯನ್ನು ಪ್ರತಿದಿನ ನೆನಪಿಸುವ ದಿನದರ್ಶಿಕೆಯನ್ನು ಬಹುಸುಂದರವಾಗಿ ಅಷ್ಟೇ ವಿಶಿಷ್ಟವಾಗಿ ಹೊರತಂದಿರುವ ಸಂಘದ ಕಾರ್ಯ ನಿಜಕ್ಕೂ ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ಈ ಸರಳ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಮೈಸೂರು ಆಕಾಶವಾಣಿ ಕೇಂದ್ರದ ಸಹಾಯಕ ನಿರ್ದೇಶಕರಾದ ಎಸ್.ಎಸ್.ಉಮೇಶ್ ಅವರು ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಒಂದು ಸಂಘವನ್ನು ಅದೂ ಕೂಡ ಕಾರ್ಮಿಕರ ಸಂಘವನ್ನು ಕಟ್ಟುವುದು ಅದನ್ನು ಸನ್ಮಾರ್ಗದಲ್ಲಿ ನಡೆಸುವುದು ಬಹಳ ಕಷ್ಟ. ಆದರೆ ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಎಲ್ಲರೂ ಒಗ್ಗೂಡಿ ಕ್ರಿಯಾತ್ಮಕವಾಗಿ ಸಂಘಟನೆಯನ್ನು ಮಾಡಿ ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಒಂದು ಅಪರೂಪದ ಕಾರ್ಮಿಕ ಸಂಘಟನೆಯಾಗಿದೆ. ಇಂತಹ ಮಾದರಿ ಕಾರ್ಮಿಕ ಸಂಘಟನೆ ತಮಗಾಗಿ ಸರ್ಕಾರ ನೀಡುತ್ತಿರುವ ಎಲ್ಲಾ ರೀತಿಯ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಇನ್ನೂ ಸದೃಢವಾಗಿ ಬೆಳೆಯಬೇಕೆಂದ ಅವರು, ಒಂದು ಮಗು ಹುಟ್ಟಿದಂದಿನಿಂದ ಮಣ್ಣಾಗುವ ತನಕ ಶಿಕ್ಷಣದಿಂದ ಹಿಡಿದು ಆರೋಗ್ಯ, ಆರೈಕೆ, ಆಹಾರ, ವಸತಿ, ಮದುವೆ, ಮುಂಜಿ, ನೋವು ನಲಿವುಗಳಿಗೆ ಕೊನೆಗೆ ಸತ್ತಾಗ ಅಂತ್ಯ ಸಂಸ್ಕಾರಕ್ಕೂ ವಿವಿಧ ಯೋಜನೆಗಳ ಮೂಲಕ ಸರ್ಕಾರ ನೆರವು ನೀಡುತ್ತಿದೆ ಎಂದು ಕಾರ್ಮಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ತಿಳಿಸಿಕೊಟ್ಟರು.

ಹಿರಿಯ ಸದಸ್ಯ ಬಸವರಾಜು ಅವರು ಸಂಘದ ಹುಟ್ಟು ಮತ್ತು ಬೆಳವಣಿಗೆ ಹಾಗೂ ಮುಂದಿನ ದಿನಗಳಲ್ಲಿ ಸಂಘ ಮಾಡಬೇಕಾಗಿರುವ ಒಳ್ಳೆಯ ಕಾರ್ಯಗಳ ಬಗ್ಗೆ ಮಾತನಾಡಿ ಸಂಘದ ಹಿತ ದೃಷ್ಟಿಯಿಂದ ಹಲವು ಸಲಹೆಗಳನ್ನು ನೀಡಿದರು. ಸಂಘದ ಅಧ್ಯಕ್ಷ ಎಸ್. ಮಹೇಶ್ ಜಯನಗರ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಎಂ.ಎಸ್. ಸುರೇಶ್ ಕುಮಾರ್, ಕಾರ್ಯದರ್ಶಿ ಎಂ.ರವಿಕುಮಾರ್, ನಿರ್ದೇಶಕರುಗಳಾದ ಚಂದ್ರೇಗೌಡ, ಅನಿಲ್ ಕುಮಾರ್, ಉದ್ಯಮಿಗಳಾದ ಚೇತನ್, ಸಂತೋಷ್ ಕುಮಾರ್, ಹಾಗೂ ರಾಜೇಶ್ವರಿ ಉಮೇಶ್ ಇನ್ನಿತರರು ಉಪಸ್ಥಿತರಿದ್ದರು.

Gayathri SG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

22 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

34 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

43 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

54 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago