News Karnataka Kannada
Tuesday, April 30 2024
ಮೈಸೂರು

ಮೈಸೂರು: ಒಂದು ನಾಡಿನ ಪ್ರಗತಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಅವಲಂಬಿಸಿರುತ್ತದೆ!

The progress of a country depends on the richness of art, literature, culture!
Photo Credit : By Author

ಮೈಸೂರು: ಒಂದು ನಾಡಿನ ಪ್ರಗತಿ ಅಲ್ಲಿನ ಹಣ ಮತ್ತು ಸಂಪತ್ತನ್ನು ಮಾತ್ರ ಅವಲಂಬಿಸಿರುವುದಿಲ್ಲ. ಅಲ್ಲಿನ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಅವಲಂಬಿಸಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾರಾಣಿ ಮಹಿಳಾ ಕಲಾ ಕಾಲೇಜು ಸಹಯೋಗದಲ್ಲಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಆವರಣದಲ್ಲಿ ವಿಶೇಷ ಘಟಕ ಯೋಜನೆಯಡಿ ಹಮ್ಮಿಕೊಂಡಿದ್ದ, ಜನಪರ ಉತ್ಸವ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೂಲಭೂತವಾಗಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಬ್ಬ ಕಲಾವಿದ ಇರುತ್ತಾನೆ. ನಾವೆಲ್ಲರೂ ಶಿಕ್ಷಣದ ಸಮಯದಲ್ಲಿ ಪಠ್ಯದ ಓದು, ಅಂಕಗಳು, ಬರವಣಿಗೆ ಇಷ್ಟಕ್ಕೆ ಮಾತ್ರ ಸೀಮಿತ ಎನ್ನುವಷ್ಟರ ಮಟ್ಟಿಗೆ ಶಿಕ್ಷಣವನ್ನು ತೆಗೆದುಕೊಂಡಿದ್ದೇವೆ. ಆದರೆ ನಮ್ಮೊಳಗಿನ ಕಲಾವಿದ ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಹಿಂದೆ ಗ್ರಾಮೀಣ ಭಾಗದ ಜನರೆಲ್ಲರೂ ಕಲಾವಿದರೆ ಆಗಿದ್ದರು ಎನ್ನಬಹುದು. ಏಕೆಂದರೆ ಇಂದಿನ ಆಧುನಿಕತೆಗಳಲ್ಲೂ ನಾವು ನಿರ್ವಹಿಸಲಾಗದಂತ ಕಲೆ ಮತ್ತು ಶಿಲ್ಪ ಕಲೆಗಳನ್ನು ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪೂರ್ವಜರು ನಿರ್ವಹಿಸಿದ್ದಾರೆಂದರೆ ಅವರು ಎಂತಹ ಕುಶಲಿಗಳು ಮತ್ತು ಕಲಾವಿದರು ಎಂಬುದನ್ನು ಗಮನಿಸಬಹುದು ಎಂದರು.

ಇಂದು ನಾವು ಈ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಪ್ರಮುಖ ಕಾರಣವೆಂದರೆ ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದ್ದಾರೆ. ಒಂದು ಅವಕಾಶ ಸಿಕ್ಕರೆ ಯಾವ ಪುರುಷನಿಗೂ ಕಡಿಮೆ ಇಲ್ಲವೆಂಬಂತೆ ಎಲ್ಲಾ ಕ್ಷೇತ್ರಗಳಲ್ಲೂ ಮೇಲುಗೈ ಸಾಧಿಸಿದ್ದಾರೆ. ಮಹಿಳೆಯರ ಸಾಧನೆಗೆ ವೇದಿಕೆಗಳನ್ನು ಒದಗಿಸುವುದಕ್ಕೆ ಇಂತಹ ಕಾರ್ಯಕ್ರಮಗಳು ನೆರವಾಗಬೇಕೆಂಬ ಉದ್ದೇಶದಿಂದ ಈ ಕಾಲೇಜಿನಲ್ಲಿ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರು ವಿಶೇಷ ಘಟಕ ಯೋಜನೆಯಡಿಯಲ್ಲಿ ಇಲಾಖೆಯ ವತಿಯಿಂದ ಆಯೋಜಿಸುವಂತಹ ವಾರ್ಷಿಕ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದ ಮೂಲಕ ಒಂದು ಸಮುದಾಯದ ಎಲ್ಲಾ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶ್ರೀನಿವಾಸ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿಗಳಾದ ಡಾ.ಆರ್.ಜಯರಾಮ್, ಸಾಂಸ್ಕೃತಿಕ ವೇದಿಕೆಯ ಖಜಾಂಚಿ ಬಿ.ಸವಿತಾ, ಸೇರಿದಂತೆ ಉಪನ್ಯಾಸಕರು ವಿದ್ಯಾರ್ಥಿನಿಯರು ಹಾಗೂ ಅನೇಕ ಕಲಾತಂಡಗಳ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು