Categories: ಮೈಸೂರು

ಮೈಸೂರು: ವಂದೇ ಭಾರತ್ ರೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ವಂದೇ ಭಾರತ್ ರೈಲು ಸೋಮವಾರ ಚೆನ್ನೈನಿಂದ ಮೈಸೂರಿಗೆ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದ್ದು ಎಲ್ಲರ ಗಮನಸೆಳೆದಿದೆ.

ದಕ್ಷಿಣ ಭಾರತದ ಮೊದಲ, ದೇಶದ ಅತ್ಯಂತ ವೇಗದ ರೈಲು ಎಂದೇ ಹೆಸರಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನ.11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ರೈಲಿನ ತಾಂತ್ರಿಕ ದೋಷಗಳನ್ನು ಪತ್ತೆ ಮಾಡಿ ಅಗತ್ಯ ಮಾರ್ಪಾಡುಗಳನ್ನು ಮಾಡುವ ಸಲುವಾಗಿ ಸೋಮವಾರ ಚೆನ್ನೈನಿಂದ ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ಪ್ರಾಯೋಗಿಕ ಸಂಚಾರ ನಡೆಸಲಾಯಿತು.

ಚೆನ್ನೈನಿಂದ 5.50ಕ್ಕೆ ಹೊರಟ ವಂದೇ ಭಾರತ್ 10.20ಕ್ಕೆ ಬೆಂಗಳೂರಿಗೆ ಆಗಮಿಸಿ ಬಳಿಕ 10.30ಕ್ಕೆ ಅಲ್ಲಿಂದ ಹೊರಟು 12.13ಕ್ಕೆ ಮೈಸೂರಿಗೆ ಆಗಮಿಸಿತು. ಈ ಮೂಲಕ ಚೆನ್ನೈ-ಮೈಸೂರು ನಡುವಿನ 497 ಕಿ.ಮೀ.ಅಂತರವನ್ನು ಈ ರೈಲು 6 ಗಂಟೆ 23 ನಿಮಿಷದ ಅವಧಿಯಲ್ಲಿ ಕ್ರಮಿಸಿದೆ. ಹಾಗೆಯೇ ಬೆಂಗಳೂರಿನಿಂದ ಮೈಸೂರಿಗೆ ಬರಲು 1 ಗಂಟೆ 43 ನಿಮಿಷ ತೆಗೆದುಕೊಂಡಿತು.

1.10ಕ್ಕೆ ಮೈಸೂರಿನಿಂದ ಚೆನ್ನೈಗೆ ಹೊರಟ ರೈಲು ಗಾಡಿಯನ್ನು ಇಲಾಖೆಯ ಸ್ವಚ್ಛತಾ ಕಾರ್ಯ ಸಿಬ್ಬಂದಿ ಎಲ್ಲಾ 14 ಕೋಚ್‌ಗಳನ್ನು ಸ್ವಚ್ಛಗೊಳಿಸಿದರು. ಬಳಿಕ ಶ್ವಾನದೊಂದಿಗೆ ಆಗಮಿಸಿದ ರೈಲ್ವೆ ಪೊಲೀಸರು ಇಡೀ ರೈಲನ್ನು ತಪಾಸಣೆ ನಡೆಸಿದರು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರತಿ ದಿನ ಬೆಳಗ್ಗೆ 5.50ಕ್ಕೆ ಚೆನ್ನೈನಿಂದ ಹೊರಟು ಬೆಂಗಳೂರಿಗೆ 10.25ಕ್ಕೆ ತಲುಪಲಿದೆ. 10.30ಕ್ಕೆ ಬೆಂಗಳೂರಿನಿಂದ ಹೊರಟು 12.15ಕ್ಕೆ ಮೈಸೂರು ರೈಲ್ವೆ ಜಂಕ್ಷನ್ ತಲುಪಲಿದೆ. ಮತ್ತೆ ಮಧ್ಯಾಹ್ನ 1.05ಕ್ಕೆ ಮೈಸೂರಿನಿಂದ ಹೊರಡಲಿದ್ದು, ಮಧ್ಯಾಹ್ನ 2.55ಕ್ಕೆ ಬೆಂಗಳೂರು ತಲುಪಲಿದೆ. 5 ನಿಮಿಷದ ನಿಲುಗಡೆ ಇರುತ್ತದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.35ಕ್ಕೆ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣ ತಲುಪಲಿದೆ.

ಮೈಸೂರು ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರಂಗೆ ೧೪ ಕೋಚ್‌ಗಳಿರುವ ಶ್ವೇತ-ನೀಲಿ ಬಣ್ಣದ ರೈಲು ಗಾಡಿ ಆಗಮಿಸುತ್ತಿದ್ದಂತೆ ಪ್ರಯಾಣಿಕರು ಮತ್ತು ರೈಲ್ವೆ ಅಧಿಕಾರಿಗಳು, ಸಿಬ್ಬಂದಿಯಿಂದ ಹರ್ಷೋದ್ಘಾರ ಮುಗಿಲು ಮುಟ್ಟಿತು. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಶಿಳ್ಳೆ-ಚಪ್ಪಾಳೆ ಹೊಡೆದು ಸಂಭಮಿಸಿದರು. 50 ನಿಮಿಷಗಳ ಕಾಲ ನಿಲ್ದಾಣದಲ್ಲಿ ಇದ್ದ ಹಿನ್ನೆಲೆ ನೂರಾರು ಮಂದಿ ತಮ್ಮ ಮೊಬೈಲ್‌ಗಳ ಮೂಲಕ ರೈಲಿನ ಒಳಗೆ ಮತ್ತು ಹೊರಗೆ ನಿಂತು ಸೆಲ್ಫಿ, ಫೋಟೋ ತೆಗೆದುಕೊಂಡು ಸಂಭ್ರಮಿಸಿದರು.

Sneha Gowda

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

14 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

32 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

59 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago