Categories: ಮೈಸೂರು

ಮೈಸೂರು: ವಿದ್ಯಾಧೀಶತೀರ್ಥ ಸ್ವಾಮೀಜಿಯಿಂದ ಭಕ್ತರಿಗೆ ಮುದ್ರಾಧಾರಣೆ

ಮೈಸೂರು:  ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಸರಸ್ವತಿಪುರಂ  ಶ್ರೀ ಕೃಷ್ಣಧಾಮ  ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ  ನಡೆದ ತಪ್ತ ಮುದ್ರಾಧಾರಣೆ ಕಾರ್ಯಕ್ರಮದಲ್ಲಿ ಉಡುಪಿ ಪಲಿಮಾರು ಶ್ರೀ  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳುರವರು ಹಾಗೂ  ಕಿರಿಯ ಶ್ರೀಗಳಾದ ವಿದ್ಯಾ ರಾಜೇಶ್ವರ  ಪಾದಂಗಳವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಉಡುಪಿ ಪಲಿಮಾರು ಶ್ರೀ  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳು ರವರು  ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು  ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಅನ್ನೋ ನಂಬಿಕೆ ಇದೆ. ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ. ಚಾತುರ್ಮಾಸ್ಯ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು

ಶ್ರೀ ಕೃಷ್ಣಾ ಮಿತ್ರಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ತಂತ್ರಿ ಮಾತನಾಡಿ ಬೆಳಿಗ್ಗಿನಿಂದಲೇ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡಿದ್ದಾರೆ. ಪ್ರತಿವರ್ಷವೂ ನಾನಾ ಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ ಎಂದು ಹೇಳಿದರು

ಇದೇ ಸಂದರ್ಭದಲ್ಲಿ  ಶ್ರೀವತ್ಸ, ರವಿಶಾಸ್ತ್ರಿ, ಪುಟ್ಟಣ್ಣ ಭಟ್, ಸುಧೀರ್ ಆಚಾರ್, ಗಿರೀಶ್ ಹೆಬ್ಬಾರ್, ಪ್ರೀತಂಪುರಾಣಿಕ್  ಸೇರಿದಂತೆ ಹಲವರು ಇದ್ದರು.

Sneha Gowda

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

12 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

36 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

52 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago