Categories: ಮೈಸೂರು

ಮೈಸೂರು: ನಕಲಿ ರಸಗೊಬ್ಬರ ತಯಾರಿಕೆ ಜಾಲ ಪತ್ತೆ

ಮೈಸೂರು: ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿರುವ ಪೊಲೀಸರು ನಕಲಿ ರಸಗೊಬ್ಬರ  ಮೂಟೆಗಳು, ರಸ ಗೊಬ್ಬರ ತಯಾರಿಕೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಪೊಲೀಸರ ಸಹಕಾರದೊಂದಿಗೆ ತಾಲೂಕಿನ ಮಂಡಕಳ್ಳಿ ಗ್ರಾಮದ ಹಳೆ ಕೋಳಿ ಫಾರಂನಲ್ಲಿ ನಕಲಿ ರಸಗೊಬ್ಬರದ  ಗೋದಾಮಿನ ಮೇಲೆ ದಾಳಿ ನಡೆಸಿ ನಕಲಿ ರಸಗೊಬ್ಬರ ತಯಾರಿಕಾ ಯಂತ್ರ, ಚೀಲ ಹೊಲೆಯುವ ಯಂತ್ರ, ಜೆಡಿ, ಕೆಂಪು ಮಣ್ಣು, ಬಣ್ಣ ಲೇಪನ ಮಾಡಲು ಉಪಯೋಗಿಸುವ ರೆಡ್ ಆಕ್ಸೈಡ್, ಕಳಪೆ ರಸಗೊಬ್ಬರದ ಚೀಲಗಳು ಹಾಗೂ ಬ್ರಾಂಡೆಡ್ ಕಂಪನಿಯನ್ನು ಹೋಲುವ ಖಾಲಿ ಚೀಲಗಳನ್ನು ವಶ ಪಡಿಸಿಕೊಂಡಿದ್ದಾರೆ.

ಮಂಡಕಳ್ಳಿ ಗ್ರಾಮದ ಹೆಬ್ಬಾಳೇಗೌಡ ಅವರ ಜಮೀನಿನಲ್ಲಿರುವ ಹಳೆ ಕೋಳಿಫಾರಂ ಅನ್ನು ಮೈಸೂರು ಮೂಲದ ಮಹೇಶ  ಎಂಬುವವರು ಸಾವಯವ ಗೊಬ್ಬರ ತಯಾರಿಕಾ ಘಟಕ ನಡೆಸಲು ಬೋಗ್ಯಕ್ಕೆ ಪಡೆದಿದ್ದ. ಕಳೆದ ಒಂದು ತಿಂಗಳಿಂದ ನಕಲಿ ಗೊಬ್ಬರ ತಯಾರಿಕೆ ಮಾಡಿ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯ ಗ್ರಾಮಸ್ಥರು ಅನುಮಾನಗೊಂಡು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ಕೃಷಿ ನಿರ್ದೇಶಕ ಡಾ.ಕೆ.ರಾಜು, ಸಹಾಯಕ ಕೃಷಿ ನಿರ್ದೇಶಕ ಡಾ.ಎಚ್.ಬಿ.ಮಧುಲತಾ, ಕೃಷಿ ಅಧಿಕಾರಿಗಳಾದ ಡಾ.ಪಿ.ಎನ್ ಜೀವನ್,  ಡಾ.ಕಾರ್ತಿಕ್.ಸಿ.ಎಂ, ಮೈಸೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಶಿಕುಮಾರ್, ಎಸ್‌ಐ  ಕೆಂಪಣ್ಣ, ಪೊಲೀಸ್ ಸಿಬ್ಬಂದಿ ಇದ್ದರು.

Sneha Gowda

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

15 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

29 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

40 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

51 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago