Categories: ಮೈಸೂರು

ಮೈಸೂರು: ರಾಜ್ಯದಲ್ಲಿ ಅಚ್ಚರಿಯ ನೋಟಾ ವೋಟು

ಮೈಸೂರು: ರಾಜ್ಯದಲ್ಲಿ ಸುಮಾರು 2.6 ಲಕ್ಷಕ್ಕೂ ಅಧಿಕ ಮತದಾರರು ನೊಟಾ ಒತ್ತುವ ಮೂಲಕ ಎಲ್ಲಾ ಅಭ್ಯರ್ಥಿಗಳನ್ನೂ ತಿರಸ್ಕರಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗ ಬಿಡುಗಡೆಗೊಳಿಸಿದ ಅಂಕಿಅಂಶಗಳ ಪ್ರಕಾರ 3.84 ಕೋಟಿ ಮತದಾರರ ಪೈಕಿ 2.7 ಲಕ್ಷ ಮತದಾರರು ನೋಟಾ(ಮೇಲಿನ ಯಾರು ಅಲ್ಲ) ಆಯ್ಕೆಗೆ ಮತದಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಆಮ್ ಆದ್ಮಿ ಅಭ್ಯರ್ಥಿಗಳಿಗಿಂತಲೂ ನೋಟಾ ಹೆಚ್ಚು ಮತಗಳನ್ನು ಪಡೆದುಕೊಂಡಿರುವುದು ಗಮರ್ನಾಹ ವಿಷಯ.

ಕಲಬುರ್ಗಿ ಜಿಲ್ಲೆಯ ಅಫಜಲ್‌ಪುರ ಕ್ಷೇತ್ರದಲ್ಲಿ 4,775 ಮತದಾರರು ನೋಟಾ ಆಯ್ಕೆ ಮಾಡುವ ಮೂಲಕ ರಾಜ್ಯದಲ್ಲೇ ಈ ಬಾರಿ ಹೆಚ್ಚು ನೋಟಾ ದಾಖಲಾದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿದೆ. 4377 ನೊಟಾ ಮತಗಳೊಂದಿಗೆ ಆಳಂದ ಎರಡನೇ ಸ್ಥಾನದಲ್ಲಿದೆ. ಎಲ್ಲಾ 224 ಕ್ಷೇತ್ರಗಳಲ್ಲಿ ಸರಾಸರಿ 1200 ಮತದಾರರು ನೋಟಾಗೆ ತಮ್ಮ ಮತ ಚಲಾಯಿಸಿದ್ದಾರೆ.

ಮೈಸೂರು ಜಿಲ್ಲೆಯ ಹನ್ನೊಂದು ಕ್ಷೇತ್ರಗಳಲ್ಲಿ ಒಟ್ಟು 12,575 ಮತದಾರರು ಯಾವುದೇ ಅಭ್ಯರ್ಥಿಗೆ ಮತ ನೀಡಲು ಈ ಬಾರಿ ಮನಸ್ಸು ಮಾಡಿಲ್ಲ. 11 ಕ್ಷೇತ್ರಗಳ ಪೈಕಿ ಚಾಮುಂಡೇಶ್ವರಿ ಕ್ಷೇತ್ರ 2,220 ನೋಟಾ ಮತಗಳನ್ನು ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ನಂಜನಗೂಡಿನಲ್ಲಿ 1,335, ಟಿ.ನರಸೀಪುರ 1,306, ಕೃಷ್ಣರಾಜ 1,209, ನರಸಿಂಹರಾಜ 1,184, ಎಚ್‌ಡಿ ಕೋಟೆ 1,181, ಚಾಮರಾಜ 894, ಹುಣಸೂರು 634, ವರುಣಾ 621, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ 539 ಮತಗಳು ನೋಟಾಗೆ ಹಾಕಲಾಗಿದೆ.

ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ 2013ರಲ್ಲಿ ದೇಶದಲ್ಲೆ ಪ್ರಥಮ ಬಾರಿಗೆ ಚುನಾವಣೆಯಲ್ಲಿ ನೋಟಾ ಆಯ್ಕೆ ಪರಿಚಯಿಸಲಾಯಿತು. ಅದರಂತೆ ಇವಿಎಂ ಯಂತ್ರದ ಕೊನೆಯ ಆಯ್ಕೆಯಾಗಿ ನೋಟಾ ಸೇರಿಸಲಾಗಿದೆ. ಅದಗ್ಯೂ ಒಂದು ವೇಳೆ ಚುನಾವಣೆಯಲ್ಲಿ ನೋಟಾ ಮತಗಳೇ ಹೆಚ್ಚಾದರೆ ನಂತರ ಹೆಚ್ಚು ಮತ ಪಡೆದ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಯಾವುದೇ ರೀತಿಯ ಮರು ಚುನಾವಣೆಗೆ ಅವಕಾಶವಿರುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

Gayathri SG

Recent Posts

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

10 mins ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

31 mins ago

ಮತದಾರರು ಮತ್ತು ಜಿಲ್ಲಾಡಳಿತಕ್ಕೆ ಆಲಗೂರ್ ಅಭಿನಂದನೆ

ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…

40 mins ago

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ…

56 mins ago

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯ : ಕ್ಷೇತ್ರಗಳಲ್ಲಿ ಎಷ್ಟು ಮತದಾನ

ಕರ್ನಾಟಕದಲ್ಲಿಂದು (ಮೇ 07) ಲೋಕಸಭೆಗೆ 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ…

1 hour ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ಉದ್ಯೋಗದಲ್ಲಿ ಲಾಭ

ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ…

1 hour ago